ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ..!

Spread the love

ಬೆಂಗಳೂರು,ಅ.23- ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಅಧಿಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ನಗರದಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಪರಿಣಾಮ ಅ. 22 ಮತ್ತು 23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ.

ಕರ್ನಾಟಕದಲ್ಲಿ ಮುಂಗಾರು ಮಾರುತಗಳ ಪ್ರಭಾವ ತಗ್ಗಲಿದ್ದು, ಅ. 26ರಂದು ಪೂರ್ಣ ಪ್ರಮಾಣದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ಆದರೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆ ಆಗಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಅ. 26ರವರೆಗೆ ಮಳೆ ತಗ್ಗುವ ಸೂಚನೆಗಳಿವೆ ಎಂದೂ ಹವಾಮಾನ ಇಲಾಖೆ ಹೇಳಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆಗಳು ಗುಂಡಿ ಬಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ. ಮಳೆ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಕಾರಿಗಳಿಗೆ ಸೂಚನೆ ನೀಡಲಾಗಿದೆ.ರಾಜ್ಯದಲ್ಲಿ ಮುಂದಿನ 4-5 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳ ಕೈಗೊಳ್ಳುವಂತೆ ಅಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹವಾಮಾನ ವಾತಾವರಣದ ಆಧಾರದ ಮೇಲೆ ಈಗಾಗಲೇ ಜಿಲ್ಲೆಗಳಲ್ಲಿ ಯೆಲ್ಲೋ ಹಾಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಎಲ್ಲಾ ಜಿಲ್ಲಾ ಆಯುಕ್ತರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ. ಪರಿಸ್ಥಿತಿ ಎದುರಿಸಲು ಜಿಲ್ಲಾ ಆಡಳಿತ ಮಂಡಳಿ ಸಿದ್ಧವಾಗಿದೆ.

ಚನ್ನಗಿರಿ, ಕೊಟ್ಟಿಗೆಹಾರ, ಹಿರೆಕೆರೂರು, ಸಕಲೇಶಪುರ, ತೀರ್ಥಹಳ್ಳಿ, ಶಿರಾಳಕೊಪ್ಪ, ನಾಗಮಂಗಲ, ಸಿದ್ದಾಪುರ, ಜಾನ್ಮನೆ, ಕುಂದಾಪುರ, ಅಜ್ಜಂಪುರ, ಗುಬ್ಬಿ, ತ್ಯಾಗರ್ತಿ, ಹೊಸದುರ್ಗ, ಮಾಣಿ, ವಿಟ್ಲ, ಹೊಳೆನರಸೀಪುರ, ಶ್ರವಣಬೆಳಗೊಳ, ಪುತ್ತೂರು, ತಿಪಟೂರು, ಗೇರುಸೊಪ್ಪ, ಕೊಲ್ಲೂರು, ಹೊಳೆ ಹೊನ್ನೂರು, ಹಾಸನ, ಸಂತೆಬೆನ್ನೂರು, ಕುಮಟಾ, ಜಯಪುರ, ಕೊಪ್ಪ, ತುಮಕೂರು, ಮಧುಗಿರಿ, ಚಿತ್ರದುರ್ಗ, ಕಾರವಾರ, ಸುಬ್ರಹ್ಮಣ್ಯ, ಬೆಳ್ತಂಗಡಿ, ಸಾಗರ, ತಾಳಗುಪ್ಪ, ಸೊರಬ, ಭದ್ರಾವತಿ, ಕಮ್ಮರಡಿ, ಕಡೂರು, ಶ್ರೀಮಂಗಲ, ಭಾಗಮಂಡಲ, ಉಚ್ಚಂಗಿದುರ್ಗ, ಗೌರಿಬಿದನೂರು, ಕೋಲಾರದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‍ಎಎಲ್‍ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‍ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಟಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 24 ಗಂಟೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.ಉತ್ತರ ಕನ್ನಡ, ದಕ್ಷಿಣ ಕನ್ನ, ಉಡುಪಿ ಜಿಲ್ಲಿಗಳಲ್ಲಿ ಸಾಧಾರಣ ಮಳೆಯಾಗಲಿದೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

Sri Raghav

Admin