Sunday, September 8, 2024
Homeರಾಜ್ಯರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆ ಮುನ್ಸೂಚನೆ

ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು, ಜು.26-ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳು ನಿರಂತರ ಮಳೆಯಿಂದ ಅತಿವೃಷ್ಟಿ ಹಾಗೂ ಪ್ರವಾಹಕ್ಕೆ ಸಿಲುಕಿ ನಲುಗಿದ್ದು, ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ.

ಉತ್ತರ ಒಳನಾಡಿನಲ್ಲಿ ಇಂದು ಸಹ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಲಾಗಿದೆ. ಈಗಾಗಲೇ ನಿರಂತರ ಮಳೆಗೆ ಜಲಾಶಯಗಳು ಭರ್ತಿಯಾಗಿದ್ದು, ಭಾರೀ ಪ್ರಮಾಣದಲ್ಲಿ ಜಲಾಶಯಗಳಿಂದ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ. ಹೀಗಾಗಿ ಅಪಾಯದ ಮಟ್ಟ ಮೀರಿ ನದಿಗಳು ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಾಳೆ ಬಲವಾದ ತಂಪಾದ ಮೈಲೈ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಹವಾಮಾನ ಇಲಾಖೆಯು ಆರೆಂಟ್‌ ಅಲರ್ಟ್‌ ಘೋಷಿಸಿದೆ.

ಜುಲೈ 28ರಿಂದ 30ರವರೆಗೆ ದಕ್ಷಿಣ ಒಳನಾಡಿನಲ್ಲೂ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ಸಾಧಾರಣ ಮಳೆ ಮುಂದುವರೆಯಲಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಬಲವಾದ ಮೈಲೈ ಗಾಳಿ ಬೀಸಲಿದೆ. ಕೆಲವೊಮೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ.

RELATED ARTICLES

Latest News