ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ..!

ಬೆಂಗಳೂರು, ಅ.16- ಮುಂದಿನ ಎರಡು ದಿನಗಳ ಕಾಲ ರಾಜ್ಯದ 16 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ತೀವ್ರವಾಗಿದ್ದು, ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸಕ್ರಿಯವಾಗಿದೆ. ‘ಹಾಗಾಗಿ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಕ ಮಳೆಯ ನಿರೀಕ್ಷೆ ಇರುವುದರಿಂದ ಎರಡೂ ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿನ ಕಡಿಮೆ ಒತ್ತಡದ ಪ್ರದೇಶದ ಕಾರಣ, ರಾಜ್ಯದ ಕರಾವಳಿ ಭಾಗಗಳಲ್ಲಿ ಕೂಡ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಸೈಕ್ಲೋನಿಕ್ ಸಕ್ರ್ಯುಲೇಷನ್ ಅರೇಬಿಯನ್ ಸಮುದ್ರದ ಮೇಲೆ ಕರ್ನಾಟಕ ಕರಾವಳಿಯಲ್ಲಿದೆ ಮತ್ತು ಇನ್ನೊಂದು ಪರಿಚಲನೆಯು ಬಂಗಾಳ ಕೊಲ್ಲಿಯಲ್ಲಿದೆ, ಇದರ ಪ್ರಭಾವದ ಕಾರಣ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ನಿರೀಕ್ಷೆಯಿದ್ದು, ಅದು ಅಕ ಮಳೆಗೆ ಕಾರಣವಾಗಲಿದೆ.

ನೈರುತ್ಯ ಮಾನ್ಸೂನ್‍ಗೆ ಹೋಲಿಸಿದರೆ ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್ ಅವಯಲ್ಲಿ ಹೆಚ್ಚು ಮಳೆಯಾಗುತ್ತದೆ. ವಾಸ್ತವವಾಗಿ, ಈಶಾನ್ಯ ಮಾನ್ಸೂನ್ ಆರಂಭವಾಗುವ ಮುನ್ನವೇ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದೆ.ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು, ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಯಾವುದೇ ಸೂಚನೆಗಳಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಸಹ ನಗರದ ವಿವಿಧೆಡೆ ಅಕ ಮಳೆಯಾಗಿದ್ದು, ಟ್ರಾಫಿಕ್ ಸಮಸ್ಯೆ ಎದುರಾಗಿತ್ತು. ಅಲ್ಲದೇ ಬೆಂಗಳೂರಿನಲ್ಲಿ ಇಂದು ಕೂಡ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನುಳಿದಂತೆ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿಯಲ್ಲಿ ಮಳೆಯ ಬರುವ ಸಾಧ್ಯತೆ ಇದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ.
ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆ ಸುರಿಯುತ್ತಲೇ ಇದ್ದು ಬೆಳೆ ಹಾನಿ, ಕಷ್ಟ ನಷ್ಟಗಳು ಸಂಭವಿಸಿದೆ. ಹಲವು ಜಿಲ್ಲೆಗಳಲ್ಲಿ ಕೆರೆಕಟ್ಟೆಗಳು ತುಂಬಿವೆ. ಅನ್ನದಾತರು ಭಾರಿ ಮಳೆಯಿಂದ ಸಂಕಷ್ಟ ಎದುರಿಸುವಂತಾಗಿದೆ.

ಇನ್ನು ಬೆಂಗಳೂರು ನಗರದಲ್ಲಿ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಅನೇಕ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ರಸ್ತೆಗಳಲ್ಲಿ ಅತ್ಯಕ ಪ್ರಮಾಣದಲ್ಲಿ ನೀರು ನಿಂತಿದ್ದು ಕೆರೆಯಂತಾಗಿವೆ. ಇದರಿಂದ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಗಿದೆ.

ಲಕ್ಷದ್ವೀಪದ ಆಗ್ನೇಯ ಭಾಗದಲ್ಲಿ ಮತ್ತು ಬಂಗಳಾಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ. ಇಂದು ಕೇರಳದಲ್ಲಿ ಭಾರೀ ಮಳೆಯಾಗಲಿದೆ, ನಾಳೆವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಾಯುಭಾರ ಕುಸಿತವು ಆಂಧ್ರ ಪ್ರದೇಶದ ಕಡೆ ಸಾಗಲಿದ್ದು, ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಮಂದಿನ 24 ಗಂಟೆಯಲ್ಲಿ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಕೇರಳದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಭಾರೀ ಮಳೆ ಮುನ್ಸೂಚನೆ ನೀಡಿರುವುದರಿಂದ ಬೆಟ್ಟ ಪ್ರದೇಶದಲ್ಲಿ ರಾತ್ರಿ ಸಂಚಾರವನ್ನು ನಿರ್ಬಂಸಲಾಗಿದೆ. ಮಳೆಯಿಂದ ಹಾನಿಯಾದರೆ ಕಾರ್ಯಾಚರಣೆಗಾಗಿ 6 ಎನ್ಡಿರ್ಆಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಸ್ಥಿತಿ ಇನ್ನೂ ಎರಡು ದಿನ ಮುಂದುವರೆಯಲಿದೆ. ಇದರ ಪ್ರಭಾವದಿಂದ ಕೇರಳದಲ್ಲಿ ಮಳೆ ಅಕ್ಟೋರ್ಬ 17ರ ತನಕ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕೇರಳ ಸರ್ಕಾರ ಘಟ್ಟ ಪ್ರದೇಶಗಳಲ್ಲಿ ಸಂಜೆ 7 ರಿಂದ ಬೆಳಗ್ಗೆ 7 ಗಂಟೆಯ ತನಕ ಪ್ರಯಾಣ ನಿರ್ಬಂಸಿದೆ.

ಚನ್ನಗಿರಿ, ಸಿದ್ದಾಪುರ, ಬೆಂಗಳೂರು ನಗರ, ಎಚïಎಎಲï, ಮೈಸೂರು, ಶಿರಹಟ್ಟಿ, ಹರಪ್ಪನಹಳ್ಳಿ, ಕುಶಾಲನಗರ, ಭದ್ರಾವತಿ, ಪುತ್ತೂರು, ಲಕ್ಷ್ಮೇಶ್ವರ, ಹಾರಂಗಿ, ಚಿಕ್ಕಮಗಳೂರು, ಮದ್ದೂರು, ಗೋಪಾಲನಗರ, ಹೆಸರಘಟ್ಟ, ಭಾಗಮಂಡಲದಲ್ಲಿ ಮಳೆಯಾಗಿದೆ. ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೀದರ್ನಲ್ಲಿ 16.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Sri Raghav

Admin