ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್‌ ಅಲರ್ಟ್ ಘೋಷಣೆ

ಬೆಂಗಳೂರು,ಆ.14-ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಮುನ್ಸೂಚನೆಗಳಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಿಂಚು ಹಾಗೂ ಜೋರಾದ ಗಾಳಿ ಸಹಿತ ಚದುರಿದಂತೆ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. ಕೆಲವೆಡೆ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಮಾಡಲಾಗಿದೆ. ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ … Continue reading ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್‌ ಅಲರ್ಟ್ ಘೋಷಣೆ