Thursday, June 26, 2025
Homeಜಿಲ್ಲಾ ಸುದ್ದಿಗಳು | District Newsಬೆಳಗಾವಿ | Belagaviಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು, ಪ್ರವಾಹ ಭೀತಿ

ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು, ಪ್ರವಾಹ ಭೀತಿ

Heavy rain in Belgaum district: Rivers flowing above danger level, flood threat

ಬೆಳಗಾವಿ, ಜೂ.26-ಜಿಲ್ಲೆಯ ಕಣಕುಂಬಿ ಭಾಗದಲ್ಲಿ ಮಳೆ ಅಬ್ಬರ ಜೋರಾಗಿದ್ದು ಸಪ್ತ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದ ಭೀತಿ ಶುರುವಾಗಿದ್ದು, ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಜಿಲ್ಲೆಯ ಏಳು ನದಿಗಳು ಅಪಾಯದ ಮಟ್ಟಮೀರಿ ಹರಿಯುತ್ತಿವೆ.ಖಾನಾಪುರ ತಾಲೂಕಿನ ಕಣಕುಂಬಿ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗಿದ್ದು ಮಲಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ನದಿಗೆ ಒಳ ಹರಿವು ಹೆಚ್ಚಾಗಿರುವುದರಿಂದ ಹಬ್ಬಾನಟ್ಟಿ ಮಾರುತಿ ದೇವಸ್ಥಾನ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಹತ್ತೇ ದಿನದಲ್ಲಿ ಹತ್ತು ಅಡಿಗಳಷ್ಟು ನೀರು ಬಂದಿದ್ದು ಇಡೀ ದೇವಸ್ಥಾನವೇ ಮುಳುಗಿ ಕಲಶ ಮಾತ್ರ ಗೋಚರಿಸುತ್ತಿದೆ. ದೇವಸ್ಥಾನದ ಮುಂಭಾಗದಲ್ಲಿರುವ ಶಿವನ ದೇವಸ್ಥಾನಕ್ಕೂ ನೀರು ನುಗ್ಗಿದ್ದು ಇದರಿಂದ ಇಡೀ ದೇವಸ್ಥಾನವೇ ಮುಳುಗಿದೆ.

ಖಾನಾಪುರ ಹೊರವಲಯದಲ್ಲಿ ಹರಿಯುವ ಹಾಲಾತ್ರಿ ಹಳ್ಳ ಕೂಡ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಳ್ಳಕ್ಕೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ಹೆಮ್ಮಡಗಾ, ಗವಾಳಿ, ಪಾಸ್ತೋಳಿ ಸೇರಿ ಹತ್ತಕ್ಕೂ ಅಧಿಕ ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ.

ಗೋವಾಕ್ಕೆ ಸಂಪರ್ಕಿಸುವ ಇದ್ದ ಒಂದು ಸೇತುವೆ ಕೂಡ ಮುಳುಗಿದೆ, ಮಲಪ್ರಭಾ ನದಿ ಅಕ್ಕಪಕ್ಕದ ಜಮೀನುಗಳಿಗೂ ನೀರು ನುಗ್ಗಿದ್ದು ಇದರಿಂದ ರೈತರು ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.

ಬೆಳಗಾವಿ, ಖಾನಾಪುರ, ಕಿತ್ತೂರು ತಾಲೂಕಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಇಂದು ಮೂರು ತಾಲೂಕಿನ ಶಾಲಾ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ಡಿಸಿ ಮೊಹಮ್ಮದ್ ರೋಷನ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

RELATED ARTICLES

Latest News