Friday, July 18, 2025
Homeರಾಜ್ಯಕೊಡಗು, ಉತ್ತರ ಕನ್ನಡದಲ್ಲಿ ಮಳೆ ಅಬ್ಬರ, ಶಾಲೆಗಳಿಗೆ ರಜೆ

ಕೊಡಗು, ಉತ್ತರ ಕನ್ನಡದಲ್ಲಿ ಮಳೆ ಅಬ್ಬರ, ಶಾಲೆಗಳಿಗೆ ರಜೆ

Heavy rain in Kodagu, Uttara Kannada, holiday for schools

ಕಾರವಾರ, ಜು.17- ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷೀಪ್ರಿಯಾ ರಜೆ ಘೋಷಣೆ ಮಾಡಿದ್ದಾರೆ.

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಭಾರೀ ಮಳೆ ಹಿನ್ನೆಲೆ ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಮಡಿಕೇರಿ ತಾಲ್ಲೂಕಿನಲ್ಲಿ ಗಾಳಿ ಸಹಿತ ಅಧಿಕ ಮಳೆಯಾಗುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡದಲ್ಲೂ ಮಳೆ ಅಬ್ಬರಿಸಿದ್ದು ನದಿ ನೀರಿನ ಮಟ್ಟ ಏರಿಕೆಯಾಗಿದೆ.
ಮಡಿಕೇರಿಯಲ್ಲಿ ನಿರಂತರ ಗಾಳಿಮಳೆಯಾಗುತ್ತಿದ್ದು, ಮೈಕೊರೆಯುವ ಚಳಿ ಮತ್ತು ಮಂಜು ಮುಸುಕಿದ ವಾತಾವರಣದಿಂದ ಜನ ಹಾಗೂ ವಿದ್ಯಾರ್ಥಿಗಳಿಗೆ ಸಮಸ್ಯೆ ಯಾಗಿದೆ.ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಲಾಗಿದೆ .ಈ ನಡುವೆ ಜಿಲ್ಲಾಧಿಕಾರಿ ವೆಂಕಟರಾಜ ಅವರು ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

RELATED ARTICLES

Latest News