ಬೆಂಗಳೂರು, ಮೇ 31- ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಇನ್ನೊಂದು ವಾರ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ.
ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ, ಕೊಡಗು, ರಾಮನಗರ, ಮೈಸೂರು, ದಕ್ಷಿಣ ಕನ್ನಡ, ಹಾಸನ, ಕೊಪ್ಪಳ, ಉಡುಪಿ ಮೊದಲಾದ ಜಿಲ್ಲೆಗಳ ಹಲವು ಕಡೆಗಳಲ್ಲಿ ನಿನ್ನೆ ಮಳೆಯಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನ, ಸಂಜೆ ಹಾಗೂ ರಾತ್ರಿ ಭಾರೀ ಮಳೆಯಾಗಿದ್ದು, ಕೆಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕೆಲವು ಕಡೆಗಳಲ್ಲಿ ಮರಗಳು ಮುರಿದು ಬಿದ್ದಿವೆ. ನಿರಂತರ ಮಳೆಯಿಂದ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಹರ ಸಾಹಸ ಪಡುವಂತಾಗಿತ್ತು.
ಬೆಂಗಳೂರು ರೌಡಿಗಳಿಗೆ ಎಚ್ಚರಿಕೆ ಕೊಟ್ಟ ಪೊಲೀಸ್ ಆಯುಕ್ತ ದಯಾನಂದ್
ಮುಂಗಾರು ಪೂರ್ವ ಮಳೆ ರಾಜ್ಯದಲ್ಲಿ ಜೂನ್ 7ರವರೆಗೂ ಮುಂದುವರೆಯುವ ಲಕ್ಷಣಗಳಿದ್ದು, ಸಧ್ಯಕ್ಕೆ ಸಂಪೂರ್ಣ ಬಿಡುವು ಕೊಡುವ ಸಾಧ್ಯತೆಗಳು ವಿರಳ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.
ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಸಾಧಾರಣ ಮಳೆಯಾದರೆ, ಮತ್ತೆ ಕೆಲವೆಡೆ ಭಾರೀ ಮಳೆಯಾಗುವ ಸಂಭವವೂ ಇದೆ ಎಂದರು.
ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರುತ್ತಿದ್ದು, ಕರಾವಳಿ, ಮಲೆನಾಡು, ಬೆಳಗಾವಿ, ಬಾಗಲಕೋಟೆ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಂಜೆ ಇಲ್ಲವೇ ರಾತ್ರಿ ವೇಳೆ ಮಿಂಚು, ಗುಡುಗಿನಿಂದ ಕೂಡಿದ ಮಳೆಯಾಗುವ ಮುನ್ಸೂಚನೆಗಳಿವೆ. ಆದರೆ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳು ವಿರಳ ಎಂದು ಅವರು ಹೇಳಿದರು.
ಡಬ್ಬಲ್ ಇಂಜಿನ್ ಸರ್ಕಾರದ ನಿರ್ಧಾಗಳಿಂದ ಜನ ಸಾಲಗಾರರಾಗಿದ್ದಾರೆ: ಸಚಿವ ಪ್ರಿಯಾಂಕ ಖರ್ಗೆ
ನೈರುತ್ಯ ಮುಂಗಾರು ಜೂ.8ರ ನಂತರ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಗಳಿವೆ. ಈಗ ಮುಂಗಾರು ಪೂರ್ವ ಮಳೆ ಆರ್ಭಟಿಸುತ್ತಿರುವುದರಿಂದ ಮುಂಗಾರು ಮಳೆ ಆರಂಭವೇ ದುರ್ಬಲವಾಗುವ ಸಂಭವಿದೆ ಎಂದರು.
Heavyrain, #lashes, #Karnataka,