ಬಂಗಾಳಕೊಲ್ಲಿಯಲ್ಲಿ ಚಂಡಮಾರುತ, ರಾಜ್ಯದಲ್ಲಿ ಮಳೆ ಸಾಧ್ಯತೆ

Social Share

ಬೆಂಗಳೂರು, ಡಿ.7- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ಸ್ವರೂಪದ ವಾಯುಭಾರ ಕುಸಿತವು ಚಂಡಮಾರುತವಾಗಿ ಮಾರ್ಪಾಡಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ.

ಕಳೆದ ಎಂಟು ಹತ್ತು ದಿನಗಳಿಂದ ಮಳೆ ಬಿಡುವು ಕೊಟ್ಟಿದ್ದು, ಒಣ ಹವೆ ಮುಂದುವರೆದಿತ್ತು. ಆದರೂ ಚಳಿಯ ತೀವ್ರತೆ ಅಷ್ಟಾಗಿ ಕಂಡು ಬರುತ್ತಿಲ್ಲ. ಚಂಡಮಾರುತದ ಪರಿಣಾಮದಿಂದ ನಾಳೆಯಿಂದ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಡಿ.9ರಿಂದ 12ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

ರಾಜ್ಯದ ಪೂರ್ವಭಾಗದ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಭಾಗದ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಚದುರಿದಂತೆ ಕೆಲವೆಡೆ ಮಳೆಯಾಗುವ ಸಂಭವವಿದೆ ಹವಾಮಾನ ತಜ್ಞರು ತಿಳಿಸಿದ್ದಾರೆ.

BEST CEO ಅವಾರ್ಡ್ ಗೆ ಎನ್.ಜಯರಾಮ್ ಭಾಜನ

ತಮಿಳುನಾಡಿನ ಉತ್ತರ ಹಾಗೂ ಆಂಧ್ರಪ್ರದೇಶದ ದಕ್ಷಿಣ ಭಾಗದ ಬಂಗಾಳಕೊಲ್ಲಿಯಲ್ಲಿ ತೀವ್ರ ಸ್ವರೂಪದ ವಾಯುಭಾರ ಕುಸಿತ ಉಂಟಾಗಿದೆ. ಇದು ಇಂದು ಸಂಜೆ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಇದರಿಂದ ಆಂಧ್ರಪದ್ರದೇಶ, ಪಾಂಡಿಚೆರಿ ಹಾಗೂ ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ.

ಆದರೆ, ಇದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದ್ದು, ಹಗುರದಿಂದ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ಹೇಳಿದ್ದಾರೆ.

ಆದರೆ, ಈ ಚಂಡ ಮಾರುತವು ಪ್ರಬಲವಾಗುವ ಲಕ್ಷಣಗಳಿಲ್ಲ. ಒಂದೆರದು ದಿನದಲ್ಲಿ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ಭೂಸ್ಪರ್ಶವಾಗಿ ತನ್ನ ಸಾಮಥ್ರ್ಯ ಕಳೆದುಕೊಂಡು ದುರ್ಬಲವಾಗಲಿದೆ. ಬಳಿಕ ಕರ್ನಾಟಕದ ಮೂಲಕ ಹಾದು ಹೋಗಿ ಅರಬ್ಬೀ ಸಮುದ್ರ ತಲುಪುವ ನಿರೀಕ್ಷೆ ಇದೆ. ಹೀಗಾಗಿ ಮೋಡಗಳ ಸಾಲು ಹಾದುಹೋಗುವ ಮಾರ್ಗದಲ್ಲಿ ಮಳೆಯಾಗಲಿದೆ ಎಂದಿದ್ದಾರೆ.

ದುಬಾರಿ ಮೊಬೈಲ್‍ಗಳನ್ನು ಎಗರಿಸುತ್ತಿದ್ದ ನಾಲ್ವರ ಬಂಧನ

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕರು ಹಾಗೂ ನಿವೃತ್ತ ವಿಶೇಷ ನಿರ್ದೇಶಕರಾದ ವಿ.ಎಸ್.ಪ್ರಕಾಶ್ ಪ್ರಕಾರ, ವಾಯುಭಾರ ಕುಸಿತವು ಚಂಡಮಾರುತವಾಗಲಿದ್ದು, ಅದರ ಪ್ರಭಾವವು ಶ್ರೀಲಂಕಾ, ತಮಿಳುನಾಡು ಹಾಗೂ ಕೇರಳದ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಉಂಟಾಗಲಿದೆ. ರಾಜ್ಯದ ದಕ್ಷಿಣದ ಜಿಲ್ಲೆಗಳಲ್ಲಿ ಮಾತ್ರ ಅದರ ಪ್ರಭಾವ ಕಂಡುಬರಲಿದ್ದು,

ಡಿ.9ರಿಂದ ಮೋಡ ಕವಿಯುವ ವಾತಾವರಣವಿರಲಿದ್ದು ಡಿ.10 ರಿಂದ 12ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಆದರೆ, ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಹಾರಾಷ್ಟ್ರ – ಕರ್ನಾಟಕ ನಡುವೆ ಬಸ್ ಸೇವೆ ಬಂದ್

ಡಿ.13-14ರಂದು ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರ ಮಳೆಯಾಗವು ಸಂಭವವಿದೆ. ಉತ್ತರ ಕರ್ನಾಟಕದ ಜಿಲ್ಲೆಗಳ ಮೇಲೆ ಚಂಡ ಮಾರುತದ ಪರಿಣಾಮವಾಗುವ ಸಾಧ್ಯತೆಗಳಿಲ್ಲ ಎಂದು ಹೇಳಿದ್ದಾರೆ.

#HeavyRainWarning #Karnataka, #Bengaluru, #Udupi, #Mysuru #Kodagu,

Articles You Might Like

Share This Article