Friday, May 3, 2024
Homeಇದೀಗ ಬಂದ ಸುದ್ದಿವಿಶ್ವಾಸ ಮತ ಯಾಚನೆಯಲ್ಲಿ ಪಾಲ್ಗೊಂಡ ಹೇಮಂತ್ ಸೊರೆನ್

ವಿಶ್ವಾಸ ಮತ ಯಾಚನೆಯಲ್ಲಿ ಪಾಲ್ಗೊಂಡ ಹೇಮಂತ್ ಸೊರೆನ್

ರಾಂಚಿ, ಫೆ 5 (ಪಿಟಿಐ) ಬಂಧಿತ ಜೆಎಂಎಂ ನಾಯಕ ಹಾಗೂ ಜಾರ್ಖಂಡ್‍ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಇಂದು ವಿಧಾನಸಭೆಗೆ ಆಗಮಿಸಿ ಚಂಪೈ ಸೊರೆನ್ ನೇತೃತ್ವದ ಸರ್ಕಾರದ ವಿಶ್ವಾಸ ಮತಯಾಚನೆಯಲ್ಲಿ ಭಾಗವಹಿಸಿದ್ದಾರೆ.

ರಾಂಚಿಯ ವಿಶೇಷ ನ್ಯಾಯಾಲಯವು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರಿಗೆ ಸದನದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿತ್ತು. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯವು ಜನವರಿ 31 ರಂದು ಬಂಧಿಸಿತ್ತು. ಫೆಬ್ರವರಿ 2 ರಂದು ನ್ಯಾಯಾಲಯ ಅವರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿತ್ತು.

ಹೇಮಂತ್ ಸೊರೆನ್ ಅವರು ವಿಶೇಷ ಪಿಎಂಎಲ್‍ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಹೊಸ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಕೋರಿದ್ದರು.

ಇನ್ನೂ ಬುದ್ದಿ ಕಲಿಯದ ಮಾಲ್ಡಿವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು

ತಾವು ವಿಧಾನಸಭೆಯ ಸದಸ್ಯರಾಗಿದ್ದು, ಸದನದ ವಿಶೇಷ ಅಧಿವೇಶನದಲ್ಲಿ ಭಾಗವಹಿಸುವ ಹಕ್ಕಿದೆ ಎಂದು ಅವರು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು. ಚಂಪೈ ಸೊರೆನ್ ನೇತೃತ್ವದ ಹೊಸ ಸರ್ಕಾರವು ಸದನದಲ್ಲಿ ತನ್ನ ಬಹುಮತವನ್ನು ಸಾಬೀತುಪಡಿಸಲು ಕರೆದಿರುವ ವಿಶೇಷ ಅಧಿವೇಶನದಲ್ಲಿ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಹೇಮಂತ್ ಬಂಧನದ ನಂತರ ಜಾರ್ಖಂಡ್‍ನ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

RELATED ARTICLES

Latest News