ಬೆಂಗಳೂರು, ಆ.26- ರಸ್ತೆ ಗುಂಡಿಗಳನ್ನು ಒಂದೆರಡು ನಿಮಿಷಗಳಲ್ಲಿ ಮುಚ್ಚಬಹುದಾದ ಅತ್ಯಾಧುನಿಕ ತಂತ್ರಜ್ಞಾನವನ್ನು ಬೆಂಗಳೂರಿನಲ್ಲಿ ಅಳವಡಿಸಿತ್ತಿರುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಿನ್ನೆ ರಾತ್ರಿ 12.30ರ ಸುಮಾರಿಗೆ ಬಾಗಲೂರು ಬಸ್ ನಿಲ್ದಾಣ ಹಾಗೂ ಇತರ ಮೂರು ಕಡೆ ರಸ್ತೆ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದ ಬಳಿಕ ಡಿ.ಕೆ .ಶಿವಕುಮಾರ್ ಸುದ್ದಿಗಾರರ ಜೊತೆ ಮಾತನಾಡಿದರು.
ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ತಮ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ರಸ್ತೆ ಗುಂಡಿ ಗಮನ ತಂತ್ರಾಂಶ (ಆ್ಯಪ್) ಸಿದ್ದಪಡಿಸಿದ್ದೇವೆ. ಪೊಲೀಸರಿಗೂ ಅವರ ಠಾಣೆಗಳ ವ್ಯಾಪ್ತಿಯಲ್ಲಿ ಗುಂಡಿಗಳಿರುವ ಪಟ್ಟಿ ಕೊಡಲು ತಿಳಿಸಲಾಗಿತ್ತು. ಅದರಂತೆ ಪಟ್ಟಿ ನೀಡಿದ್ದಾರೆ. ಆ್ಯಪ್ನಲ್ಲಿ ನಾಗರೀಕರು ರಸ್ತೆಗುಂಡಿಗಳ ಫೋಟೋಗಳನ್ನು ಕಳುಹಿಸುತ್ತಾರೆ. ಬಿಬಿಎಂಪಿನ ಅಧಿಕಾರಿಗಳು ತಕ್ಷಣವೇ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳುತ್ತಾರೆ ಎಂದರು.
ಇತ್ತೀಚೆಗೆ ಬಾಗಲೂರು ರಸ್ತೆಯಲ್ಲಿ ಹೋದಾಗ ರಸ್ತೆ ಸ್ಥಿತಿ ನೋಡಿ ಬೇಸರವಾಗಿತ್ತು. ನಗರದ ಎಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ. 5 ಸಾವಿರಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 4400 ರಸ್ತೆ ಗುಂಡಿಗಳನ್ನು ಆದ್ಯತೆ ಮೇಲೆ ಮುಗಿಸಲು ಸೂಚನೆ ನೀಡಲಾಗಿದೆ. ಅದರಂತೆ ಕಳೆದ 4 ದಿನಗಳಿಂದ 2200 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳಿದರು.
ನಗರದಲ್ಲಿ ಸ್ವಚ್ಛತೆ ಕಾಪಾಡುವ ಕೆಲಸ ಮಾಡಲಾಗುತ್ತಿದ್ದು, ಸ್ಕೈವಾಕ್ ಗಳನ್ನು ಸ್ವಚ್ಛ ಮಾಡಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಿ ಹೋಗುವುದು ಮಾತ್ರವಲ್ಲ, ಗುಣಮಟ್ಟದ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಹಾಟ್ ಮಿಕ್್ಸ, ಕೋಲ್್ಡ ಮಿಕ್್ಸ ಹಾಗೂ ಇಕೋಫಿಕ್್ಸ ಸೇರಿದಂತೆ ಮೂರು ಮಾದರಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬಾರೀ ವಾಹನಗಳ ಓಡಾಟ, ಮಳೆಗಾಲ ಸೇರಿದಂತೆ ಇನ್ನಿತರೆ ಸಮಸ್ಯೆಗಳಿಂದಾಗಿ ನಿರಂತರವಾಗಿ ರಸ್ತೆಗಳಲ್ಲಿ ಗುಂಡಿಗಳಾಗುತ್ತಿರುತ್ತವೆ. ಅದನ್ನು ಮುಚ್ಚುವ ಕೆಲಸವನ್ನು ನಾವು ಮಾಡುತ್ತಲೇ ಇರಬೇಕಾಗುತ್ತದೆ. ಈ ಸಮಸ್ಯೆಗೆ ಪರಿಹಾರವಾಗಿ ಹಂತ-ಹಂತವಾಗಿ ಕಾಂಕ್ರೀಟ್ ರಸ್ತೆ ಮಾಡಲಾಗುತ್ತಿದೆ. ಇದು 30 ವರ್ಷ ಬಾಳಿಕೆ ಬರಲಿದೆ ಎಂದರು.
ಗುಂಡಿಗಳಿಂದಲೇ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂಬುದನ್ನು ನಾನು ಗಮನಿಸಿದ್ದೇನೆ. ಹೆಣ್ಣು ಮಕ್ಕಳನ್ನು, ಚಿಕ್ಕಮಕ್ಕಳನ್ನು ಕರೆದೊಯ್ಯುವಾಗ ತೊಂದರೆಗಳಾಗಿದೆ. ಅದಕ್ಕಾಗಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ರಸ್ತೆ ಗುಂಡಿಗಳ ಮೇಲ್ಚಿಚಾರಣೆಗಾಗಿಯೇ ರಸ್ತೆ ಗುಂಡಿ ಗಮನ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದರು. ಬಿಬಿಎಂಪಿಯ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹಾಗೂ ಇತರ ಅಧಿಕಾರಿಗಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
- ಕೇಸರಿ ಶಾಲು ಧರಿಸಿದ್ದ ಟ್ರಾವಲ್ಸ್ ಕಾರ್ಮಿಕ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಮೂವರು ಕಿಡಿಗೇಡಿಗಳ ಸೆರೆ
- ರೌಡಿ ಬಿಕ್ಲುಶಿವ ಕೊಲೆಯ ಪ್ರಮುಖ ಆರೋಪಿ ಜಗ್ಗಿ ಅರೆಸ್ಟ್
- ಆರ್ಎಸ್ಎಸ್ನ ಪ್ರಾರ್ಥನೆ ಮಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿಸಿಎಂ ಡಿಕೆಶಿ
- “ಟೆಸ್ಟ್ ಕ್ರಿಕೆಟ್ನಿಂದ ಕೊಹ್ಲಿ ನಿವೃತ್ತಿ ನಿರ್ಧಾರದ ಹಿಂದೆ ಏನೋ ಅಸಾಮಾನ್ಯ ಇರಬಹುದು”
- ಬೆಂಗಳೂರಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ಬೀದಿ ನಾಯಿಗಳಿಗೆ ಊಟ ಹಾಕುವಂತಿಲ್ಲ