Wednesday, March 12, 2025
Homeಜಿಲ್ಲಾ ಸುದ್ದಿಗಳು | District Newsಮೈಸೂರು | Mysuruಹಕ್ಕಿ ಜ್ವರದ ಭೀತಿ ಹಿನ್ನಲೆಯಲ್ಲಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಕಟ್ಟೆಚ್ಚರ

ಹಕ್ಕಿ ಜ್ವರದ ಭೀತಿ ಹಿನ್ನಲೆಯಲ್ಲಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಕಟ್ಟೆಚ್ಚರ

High alert at Chamarajendra Zoo in Mysore due to bird flu scare

ಮೈಸೂರು,ಮಾ.11- ರಾಜ್ಯದಲ್ಲೂ ಹಕ್ಕಿ ಜ್ವರದ ಭೀತಿ ಹಿನ್ನಲೆ, ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕ ರಂಗಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ರಂಗಸ್ವಾಮಿ ಅವರು, ಮೃಗಾಲಯದಲ್ಲಿರುವ ಪಕ್ಷಿ ಸಂಕುಲಕ್ಕೆ ಯಾವುದೇ ತೊಂದರೆ ಆಗದಂತೆ ತೀವ್ರ ನಿಗಾ ವಹಿಸಲಾಗಿದೆ. ಪ್ರಾಣಿ ಪಾಲಕರು ಒಂದು ಪಕ್ಷಿ ಮನೆಯಿಂದ ಇನ್ನೊಂದು ಮನೆಗೆ ಹೋಗುವಂತಿಲ್ಲ. ಪ್ರವೇಶ ದ್ವಾರದಲ್ಲೇ ಫುಟ್ ಟಿಪ್ಸ್ ಅಳವಡಿಸಿದ್ದೇವೆ.

ಅದರಲ್ಲಿ ಕಾಲನ್ನು ಅದ್ದಿ ಜನ ಬರಬೇಕು. ಕೆಲಸ ಮಾಡುವವರು ಕಡ್ಡಾಯವಾಗಿ ಮಾಸ್ಟ್, ಹ್ಯಾಂಡ್ ಗ್ಲಸ್ ಹಾಕೊಳ್ಳಲು ಸೂಚಿಸಿದ್ದೇವೆ. ಪಕ್ಷಿಗಳ ಇಕ್ಕೆಗಳನ್ನು ಸಂಗ್ರಹಿಸಿ ಪ್ರಯೋಗ ಶಾಲೆಗೆ ಕಳಿಸಿಕೊಡಲಾಗಿದೆ. ನಮ್ಮಲ್ಲಿ ಅಂತಹ ಪ್ರಕರಣಗಳು ಇಲ್ಲಿವರೆಗೂ ಕಂಡು ಬಂದಿಲ್ಲ.

ಮಾಂಸಾಹಾರಿ ಪ್ರಾಣಿಗಳಿಗೆ ತರುವ ಚಿಕನ್ ಮಾಂಸವನ್ನು ಪೊಟಾಷಿಯಂ ಪರಮೋನೈಟ್‌ನಿಂದ ತೊಳೆದು ಕೊಡಲಾಗುತ್ತದೆ. ರೋಗಗ್ರಸ್ತ ಕೋಳಿ ಮಾಂಸವನ್ನು ಪ್ರಾಣಿಗಳಿಗೆ ಕೊಡುವುದಿಲ್ಲ. ನಮ್ಮಲ್ಲಿರುವ ಪಕ್ಷಿಗಳಿಗೆ ಯಾವುದೇ ರೋಗ ರುಜಿನಗಳು ಕಂಡು ಬಂದಿಲ್ಲ ಎಂದು ತಿಳಿಸಿದರು.

ಇನ್ನು ಪ್ರತಿ ವರ್ಷದಂತೆ ಈ ಬಾರಿಯೂ ಕೂಡ ಬೇಸಿಗೆ ಶುರುವಾಗಿದೆ. ಪ್ರಾಣಿಗಳಿಗೆ ತೊಂದರೆ ಆಗದಂತೆ ಜೆಟ್‌ಗಳು, ಸ್ಪಿಂಕ್ಲರ್ ಗಳ ಮೂಲಕ ನೀರು ಸಿಂಪಡಣೆ ಮಾಡುತ್ತಿದ್ದೇವೆ. ಈಗಾಗಲೇ ಆ ಕೆಲಸ ಆರಂಭವಾಗಿದೆ. ಮೃಗಾಲಯದಲ್ಲಿ ಒಟ್ಟು 45 ಕಡೆ ಈ ರೀತಿ ಜೆಟ್ ಸ್ಪಿಂಕ್ಲರ್‌ಗಳನ್ನು ಅಳವಡಿಸಲಾಗಿದೆ.

ಗೋರಿಲ್ಲಾ, ಚಿಂಪಾಜಿ, ಕೋತಿಗಳಿಗೆ ಫ್ಯಾಮ್ ಏರ್ ಕೂಲರ್‌ಗಳ ಅಳವಡಿಕೆ ಜೊತೆಗೆ ಐಸ್ ಬ್ಲಾಗ್, ಕಲ್ಲಂಗಡಿ ಹಣ್ಣುಗಳಂತಹ ತಂಪಾದ ಹಣ್ಣುಗಳನ್ನು ಕೊಡುವ ಮೂಲಕ ಅವುಗಳ ದೇಹದಲ್ಲಿ ತಾಪಮಾನ ಹೆಚ್ಚಾಗದಂತೆ ನೋಡಿಕೊಳ್ಳುತ್ತೇವೆ. ಜಿಂಕೆ, ಕಡವೆಗಳಿಗೆ ಅಲ್ಲಲ್ಲಿ ನೀರಿನ ಕೊಳ, ಕೆಸರಿನ ಕೊಳಗಳ ನಿರ್ಮಾಣ ಮಾಡಲಾಗಿದೆ.

ನೆರಳಿಗೆ ಆಶ್ರಯಕ್ಕೆ ಶೆಡ್ ನಿರ್ಮಾಣ ಕೂಡ ಮಾಡಲಾಗಿದೆ. ಒಟ್ಟಾರೆ ಬೇಸಿಗೆ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಕೆಲಸವನ್ನು ನಮ್ಮ ಸಿಬ್ಬಂದಿಗಳು ಮಾಡುತ್ತಿದ್ದಾರೆ ಎಂದು ಮೃಗಾಲಯದ ಕಾರ್ಯ ನಿರ್ವಾಹಕ ನಿರ್ದೇಶಕ ರಂಗಸ್ವಾಮಿ ತಿಳಿಸಿದರು.

RELATED ARTICLES

Latest News