Monday, September 16, 2024
Homeರಾಜಕೀಯ | Politicsಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಹೈಕಮಾಂಡ್

ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಹೈಕಮಾಂಡ್

ಬೆಂಗಳೂರು,ಆ.17- ಸಂಕಷ್ಟ ಸಮಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವ ಮೂಲಕ ವಿರೋಧ ಪಕ್ಷಗಳ ಮುಖಂಡರಿಗೆ ಮಹತ್ವದ ಸಂದೇಶ ನೀಡಿದೆ.

ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿರುವುದರಿಂದ ಕಾಂಗ್ರೆಸ್ನಲ್ಲಿ ತಳಮಳ ಶುರುವಾಗಿದೆ. ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸುರ್ಜೆವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ದೈರ್ಯ ಹೇಳಿದ್ದಾರೆ. ಬಿಜೆಪಿಯ ಷಡ್ಯಂತ್ರಗಳನ್ನು ನಾವು ರಾಜಕೀಯವಾಗಿ ಎದುರಿಸಲು ಸಿದ್ದತೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರಿಗೆ ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯೊಂದಿಗೆ ಸಭೆ ನಡೆಸಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

RELATED ARTICLES

Latest News