ಬೆಂಗಳೂರು,ನ.8- ಮಹತ್ವದ ಬೆಳವಣಿಗೆಯಲ್ಲಿ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಪೋಕ್ಸೊ ಪ್ರಕರಣದಲ್ಲಿ ಬಂಧಿಯಾಗಿದ್ದ ಮುರುಘ ಮಠದ ಶ್ರೀಗಳಿಗೆ ಹೈಕೋರ್ಟ್ ಇಂದು ಷರತ್ತು ಬದ್ದ ಮಧ್ಯಂತರ ಜಾಮೀನು ನೀಡಿದೆ.
ಜಾಮೀನು ಪಡೆದ ನಂತರ ಅವರು ಯಾವುದೇ ಕಾರಣಕ್ಕೂ ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ ಮತ್ತು ಸಾಕ್ಷಿ ನಾಶ ಮಾಡುವಂತಹ ಪ್ರಕರಣ ಕಂಡು ಬಂದಲ್ಲಿ ಜಾಮೀನು ರದ್ದುಗೊಳ್ಳಲಿದೆ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.
ಮಾನವಕಳ್ಳ ಸಾಗಾಣಿಕೆ ದಂಧೆ : ಬೆಂಗಳೂರು ಸೇರಿ ದೇಶದ ಹಲವೆಡೆ NIA ದಾಳಿ
ಪ್ರಸ್ತುತ ಒಂದು ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕಿದ್ದು, ಇನ್ನೊಂದು ಪ್ರಕರಣ ವಿಚಾರಣೆ ಹಂತದಲ್ಲಿ ಇರುವುದರಿಂದ ಅವರು ಜೈಲಿನಿಂದ ಬಿಡುಗಡೆಯಾಗುವುದು ಅನುಮಾನ ಎನ್ನಲಾಗಿದೆ. ಪಾಸ್ ಪೋರ್ಟ್ ವಶಕ್ಕೆ ನೀಡುವುದರ ಜೊತೆಗೆ ಒಟ್ಟು ಏಳು ಷರತ್ತುಗಳನ್ನ ನ್ಯಾಯಾಲಯ ವಿಧಿಸಿದೆ. ಸದ್ಯದಲ್ಲಿಯೇ ಮೊತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳ ಪರವಾಗಿ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ