Thursday, December 12, 2024
Homeರಾಷ್ಟ್ರೀಯ | Nationalದರ್ಶನ್ ಚಾರ್ಜ್‌ಶೀಟ್ ಮಾಹಿತಿ ಪ್ರಸಾರಕ್ಕೆ ಹೈಕೋರ್ಟ್ ನಿರ್ಬಂಧ

ದರ್ಶನ್ ಚಾರ್ಜ್‌ಶೀಟ್ ಮಾಹಿತಿ ಪ್ರಸಾರಕ್ಕೆ ಹೈಕೋರ್ಟ್ ನಿರ್ಬಂಧ

High Court bans Darshan Chargesheet information dissemination

ಬೆಂಗಳೂರು,ಸೆ.10- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಕುರಿತಂತೆ ಆರೋಪ ಪಟ್ಟಿಯಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ ನೀಡಿದೆ.

ದೋಷಾರೋಪಣ ಪಟ್ಟಿಯಲ್ಲಿರುವ ಗೌಪ್ಯ ಮಾಹಿತಿಯನ್ನು ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಆದೇಶಿಸಬೇಕೆಂದು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನ್ಗೌಡರ್ ರವರು ಇದ್ದ ಪೀಠ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಆದೇಶಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು 3,992 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.ದೋಷಾರೋಪ ಪಟ್ಟಿಯಲ್ಲಿರುವ ಮಾಹಿತಿಯನ್ನು ಮಾಧ್ಯಮಗಳು ಪ್ರಸಾರ ಮಾಡಬಾರದು, ಆರೋಪ
ಪಟ್ಟಿಯಲ್ಲಿರುವ ಮಾಹಿತಿ ಸೋರಿಕೆ ಮಾಡದಂತೆ ಪೊಲೀಸರಿಗೆ ಸೂಚಿಸಬೇಕು ಎಂದು ನಿನ್ನೆ ಹೈಕೋರ್ಟ್ಗೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ಅರ್ಜಿಯನ್ನು ಸ್ವೀಕರಿಸಿದ್ದ ನ್ಯಾಯಾಲಯ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳು ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿ ಆದೇಶ ನೀಡಿದ್ದಾರೆ.

RELATED ARTICLES

Latest News