ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ವಿರುದ್ಧ ಹೈಕೋರ್ಟ್ ಕಿಡಿ

Social Share

ಬೆಂಗಳೂರು, ಅ.27- ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ವಿಷಯದಲ್ಲಿ ಬಿಬಿಎಂಪಿ ನ್ಯಾಯಾಲಯದ ಆದೇಶ ಪಾಲನೆ ಮಾಡುತ್ತಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ವಿಜಯ್ ಮೆನನ್ ಹಾಗೂ ಮತ್ತಿತರರು ಸಲ್ಲಿಸಿರುವ ಮನವಿಗಳ ವಿಚಾರಣೆ ನಡೆಸಿರುವ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗಿಯ ಪೀಠ ಬಿಬಿಎಂಪಿ ವಿರುದ್ಧ ಅಸಮದಾನ ವ್ಯಕ್ತ ಪಡಿಸಿದೆ.

ನಾನು ಹಿಂದೂ ರಾಮಯ್ಯ ಕೃತಿ ವಿದ್ಯಾರ್ಥಿಗಳಿಗೆ ಪರಾಮರ್ಶನ ಗ್ರಂಥ: ಡಾ.ವೋಡೆ ಪಿ.ಕೃಷ್ಣ

ರಸ್ತೆ ಗುಂಡಿಗಳಿಂದ ಜನ ಸಾಮಾನ್ಯರು ತೊಂದರೆಗೆ ಒಳಗಾಗುತ್ತಿದ್ದಾರೆ. ಹೈಕೋರ್ಟ್ ಆದೇಶ ನೀಡಿದರೂ ಬಿಬಿಎಂಪಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತ ಪಡಿಸಿದರು.

ಎಲ್ಲರ ಪ್ರೀತಿ ವಿಶ್ವಾಸವೇ ನನ್ನ ಆಸ್ತಿ : ಪತ್ರಿಕಾರಂಗದ ಭೀಷ್ಮ ಪಿ.ರಾಮಯ್ಯ

ರಸ್ತೆ ಗುಂಡಿ ಮುಚ್ಚಲು ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ವರದಿ ನೀಡಲು ಹೈಕೋರ್ಟ್ ಸೂಚನೆ ನೀಡಿತ್ತು. ಬಿಬಿಎಂಪಿ ಪರ ವಕೀಲರಾದ ವಿ.ಶ್ರೀನಿ ಮನವಿಯ ಮೇರೆಗೆ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಲಾಗಿದೆ.

Articles You Might Like

Share This Article