Friday, November 22, 2024
Homeರಾಜ್ಯಆದಾಯ ಮೀರಿ ಆಸ್ತಿ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು, ಡಿಕೆಶಿಗೆ ಟ್ರಬಲ್ ಶುರು

ಆದಾಯ ಮೀರಿ ಆಸ್ತಿ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು, ಡಿಕೆಶಿಗೆ ಟ್ರಬಲ್ ಶುರು

ಬೆಂಗಳೂರು,ಅ.19: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ರದ್ದು ಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಇದರ ನಡುವೆಯೇ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ತನಿಖೆ ಮುಂದುವರಿಸಿ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಹೈಕೋರ್ಟ್ ಸಿಬಿಐಗೆ ಸೂಚಿಸಿದೆ. ಕಳೆದ 2014 ಮತ್ತು 2018ರ ನಡುವೆ ತಮ್ಮ ಆದಾಯಕ್ಕಿಂತ ಮೀರಿ ಆಸ್ತಿ ಗಳಿಸಿದ್ದಾರೆ ಎಂದು 2018ರಲ್ಲಿ ಸಿಬಿಐ ಪ್ರಕರಣ ದಾಖಲಿಸಿತ್ತುಇದಲ್ಲದೆ 2023ರಲ್ಲೂ ಪ್ರತ್ಯೇಕ ಪ್ರಕರಣವನ್ನು ದಾಖಲಿಸಲಾಗಿತ್ತು.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು 2023ರಲ್ಲಿ ಸಿಬಿಐ ತನಿಖೆ ತಡೆ ನೀಡುವಂತೆ ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಅವರಿಗೆ ಮಧ್ಯಂತರ ತಡೆ ನೀಡಲಾಗಿತ್ತು. ಇದೀಗ ಹೈಕೋರ್ಟ್ ಈಗ ಪುನಃ ತನಿಖೆ ಪುನಾರಂಭಿಸುವಂತೆ ಆದೇಶ ಹೊರಡಿಸಿರುವುದರಿಮದ ಮತ್ತೆ ಡಿ.ಕೆ. ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ.

ಆಸ್ಪತ್ರೆ ಮೇಲಿನ ದಾಳಿಯಲ್ಲಿ ಇಸ್ರೇಲ್ ಪಾತ್ರವಿಲ್ಲ : ಅಮೆರಿಕ ಸ್ಪಷ್ಟನೆ

ತನಿಖೆ ವೇಳೆ ಸಿಬಿಐ 200 ಕೋಟಿ ರೂ. ಅಧಿಕ ಅಕ್ರಮ ಆಸ್ತಿ ಪತ್ತೆ ಯಾಗಿದೆ ಎಂದು ಸಿಬಿಐ ವಾದ ಮಂಡಿಸಿತ್ತು, ತಡೆಯಾಜ್ಞೆ ತೆರವಿಗೆ ಮೇಲ್ಮನವಿ ಸಲ್ಲಿಸಿತ್ತು. ಈಗ ಅದನ್ನು ಮಾನ್ಯ ಮಾಡಿ ನ್ಯಾಯಾಲಯ ತನಿಖೆ ಮುಂದುವರೆಸುವಂತೆ ಸೂಚಿಸಿದೆ. ಸದ್ಯದಲ್ಲೆ ಸಿಬಿಐ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದ್ದು ಇದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

RELATED ARTICLES

Latest News