Friday, May 17, 2024
Homeರಾಜ್ಯHSRP ನಂಬರ್​ ಪ್ಲೇಟ್ ಕುರಿತು​​ ಗುಡ್ ನ್ಯೂಸ್..!

HSRP ನಂಬರ್​ ಪ್ಲೇಟ್ ಕುರಿತು​​ ಗುಡ್ ನ್ಯೂಸ್..!

ಬೆಂಗಳೂರು,ಫೆ.19- ಮಾರ್ಚ್ 3, 2019ರ ಬಳಿಕ ರಸ್ತೆಗೆ ಇಳಿಯುವ ಹೊಸ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಸುವುದು ಕಡ್ಡಾಯವಾಗಿದೆ. ಇನ್ನು ಇದಕ್ಕೂ ಮುನ್ನ ನೋಂದಣಿಗೊಂಡ ವಾಹನಗಳಿಗೆ ಹೆಚ್​​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಸಾರಿಗೆ ಇಲಾಖೆ 2024ರ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಇದೀಗ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಈ ಅವಧಿಯನ್ನೂ ವಿಸ್ತರಣೆ ಮಾಡಿದ್ದಾರೆ.

ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್​ಎಸ್​ಆರ್​ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್​ಲೈನ್​ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್​ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು” ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು.

ಇಡಿ ಮುಚ್ಚಿದರೆ ಬಿಜೆಪಿ ತೊರೆಯಲಿದ್ದಾರೆ ಘಟಾನುಘಟಿ ನಾಯಕರು : ಕೇಜ್ರಿ

ಏನಿದು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ?
ಈ HSRP ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್‌ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತೆ.

ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನ
https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
ನಿಮ್ಮ ಅನುಕೂಲಕ್ಕೆ, ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

RELATED ARTICLES

Latest News