ಬೆಂಗಳೂರು,ಮಾ.7-ರಾಜಧಾನಿ ಬೆಂಗಳೂರಿನ ಆಕರ್ಷಣೀಯ ಕೇಂದ್ರಬಿಂದುವಾದ ನಾಡಪ್ರಭು ಕೆಂಪೇಗೌಡ(ಮೆಜೆಸ್ಟಿಕ್) ಬಸ್ ನಿಲ್ದಾಣ ಇನ್ನು ಮುಂದೆ ಹೈಟೆಕ್ ಸ್ಪರ್ಶ ಪಡೆಯಲಿದೆ.
ವಿಧಾನಸೌಧದಲ್ಲಿ 2025-26ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಪ್ರಾಜೆಕ್ಟ್ ಮೆಜೆಸ್ಟಿಕ್ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಪುನರ್ ಅಭಿವೃದ್ಧಿಪಡಿಸಿ, ವಾಣಿಜ್ಯ ಸಂಕೀರ್ಣದೊಂದಿಗೆ ನಿರ್ಮಿಸಲು ಉದ್ದೇಶಿಸಲಾಗಿ ಈ ಯೋಜನೆ ಘೋಷಣೆ ಮಾಡಲಾಗಿದೆ. ‘ಅನುದಾನದ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ.