ಹೈಕೋರ್ಟ್ ಗ್ರೀನ್ ಸಿಗ್ನಲ್, ಡಿ.31ರೊಳಗೆ ಬಿಬಿಎಂಪಿ ಚುನಾವಣೆಗೆ ನಡೆಸುವಂತೆ ಆದೇಶ

Social Share

ಬೆಂಗಳೂರು,ಸೆ.30- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.ಕಳೆದ ಎರಡು ವರ್ಷಗಳಿಂದ ಚುನಾವಣೆ ಕಾಣದ ಬಿಬಿಎಂಪಿಗೆ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸುವಂತೆ ಆದೇಶಿಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ಹಾಲಿ ಪ್ರಕಟಿಸಲಾಗಿರುವ ಮೀಸಲಾತಿ ಪಟ್ಟಿಯನ್ನು ರದ್ದು ಮಾಡಿದೆ. ಜತೆಗೆ ನವೆಂಬರ್ 30ರೊಳಗೆ ಒಬಿಸಿ ಮಾನದಂಡ ಆಧರಿಸಿ ಹೊಸ ಮೀಸಲಾತಿ ಪಟ್ಟಿ ಪ್ರಕಟಿಸುವಂತೆ ಸೂಚಿಸಿದೆ.

ರಾಜ್ಯ ಸರ್ಕಾರ ಹೊಸ ಮೀಸಲಾತಿ ಪ್ರಕಟಕ್ಕೆ 16 ವಾರಗಳ ಕಾಲವಕಾಶ ಕೋರಿ ಅಫಿಡವಿಟ್ ಸಲ್ಲಿಸಿದ್ದಕ್ಕೆ, ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರು ಈ ರೀತಿ ಕಾಲಹರಣ ಮಾಡಿದರೆ ಕೂಡಲೆ ಚುನಾವಣೆ ನಡೆಸುವಂತೆ ಆದೇಶಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಜತೆಗೆ ಮೀಸಲಾತಿ ಕುರಿತ ಸರ್ಕಾರದ ಸ್ಪಷ್ಟ ನಿರ್ಧಾರ ತಿಳಿಸುವಂತೆ ಸೂಚಿಸಿ ಕೆಲಕಾಲ ಕಲಾಪ ಮುಂದೂಡಿದರು.

ಕಲಾಪ ಮತ್ತೆ ಆರಂಭವಾದ ನಂತರ ಸರ್ಕಾರದ ಅಫಿಡವಿಟ್‍ನಲ್ಲಿ ಉಲ್ಲೇಖಿಸಿರುವಂತೆ 16 ವಾರಗಳ ಕಾಲ ಅವಕಾಶ ನೀಡಲು ಸಾಧ್ಯವಿಲ್ಲ. ಡಿಸೆಂಬರ್ 31ರೊಳಗೆ ಚುನಾವಣೆ ನಡೆಯಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ಚುನಾವಣಾ ಆಯೋಗಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶಿಸಿದರು.

2020 ಸೆ. 10ರಂದು ಬಿಬಿಎಂಪಿ ಚುನಾಯಿತ ಪ್ರತಿನಿಗಳ ಅವ ಅಂತ್ಯವಾಗಿತ್ತು. ಸರ್ಕಾರ ಬಿಬಿಎಂಪಿ ಹೊಸ ಕಾಯ್ದೆ ಜಾರಿಗೆ ತಂದು 198 ವಾರ್ಡ್‍ಗಳನ್ನು 243 ವಾರ್ಡ್‍ಗಳನ್ನಾಗಿ ಮರುವಿಂಗಡಿಸಬೇಕು ಎಂಬ ಕಾರಣ ನೀಡಿ ಚುನಾವಣೆ ಪ್ರಕ್ರಿಯೆ ನಡೆಯದಂತೆ ಮಾಡಲಾಗಿತ್ತು. ಆ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾಜಿ ಸದಸ್ಯರಾದ ಎಂ. ಶಿವರಾಜು ಮತ್ತು ಅಬ್ದುಲ್ ವಾಜಿದ್ ಚುನಾವಣೆ ನಡೆಸಲು ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ವಾದವಿವಾದ ಆಲಿಸಿದ್ದ ಹೈಕೋರ್ಟ್ ತ್ರಿಸದಸ್ಯ ಪೀಠ 3 ತಿಂಗಳೊಳಗೆ ಚುನಾವಣೆ ನಡೆಸುವಂತೆ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಆದರೆ, ಸರ್ಕಾರ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿ ತಡೆಯಾe್ಞÉ ತರಲು ಯಶಸ್ವಿಯಾಗಿತ್ತು.

ಸುೀರ್ಘ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಚುನಾವಣೆಗೆ ಸಂಬಂಸಿದ ವಾರ್ಡ್ ಮರುವಿಂಗಡಣೆ, ವಾರ್ಡ್ ಮೀಸಲಾತಿ ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಪ್ರಕ್ರಿಯೆ ನಡೆಸಿದ್ದ ಸರ್ಕಾರ ವಾರ್ಡ್ ಮರುವಿಂಗಡಣೆ ಮತ್ತು ವಾರ್ಡ್ ಮೀಸಲಾತಿ ಪ್ರಕಟಿಸಿತ್ತು. ನಂತರ ಈ ಕುರಿತ ಆಕ್ಷೇಪಣೆಗಳನ್ನು ಹೈಕೋರ್ಟ್‍ನಲ್ಲೇ ಬಗೆಹರಿಸಿಕೊಳ್ಳುವಂತೆಯೂ ಸೂಚಿಸಿತ್ತು.

ಸರ್ಕಾರ ಪ್ರಕಟಿಸಿದ ವಾರ್ಡ್ ಮರುವಿಂಗಡಣೆ ಮತ್ತು ವಾರ್ಡ್ ಮೀಸಲಾತಿ ಪಟ್ಟಿಂಯಲ್ಲಿ ಲೋಪವಿದೆ ಎಂದು ಆರೋಪಿಸಿ ಕೆಲವರು ಹೈಕೋರ್ಟ್ ಎಕಸದಸ್ಯ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ವಾರ್ಡ್ ಮರುವಿಂಗಡಣೆಗೆ ಸಂಬಂಸಿದ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತ್ತು. ಇದೀಗ ಮೀಸಲಾತಿಗೆ ಸಂಬಂಸಿದ ಅರ್ಜಿಗಳ ವಿಚಾರಣೆ ನಡೆಸಿ, ಹಾಲಿ ಪ್ರಕಟಿಸಿರುವ ಮೀಸಲಾತಿ ಪಟ್ಟಿಯನ್ನು ರದ್ದು ಮಾಡಿದೆ.

ಜತೆಗೆ ನವೆಂಬರ್ 30ರೊಳಗೆ ಒಬಿಸಿ ಮಾನದಂಡದ ಆಧಾರದಲ್ಲಿ ಹೊಸದಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿ, ಡಿಸೆಂಬರ್ 31ರೊಳಗೆ ಚುನಾವಣೆ ನಡೆಸುವಂತೆ ಆದೇಶಿಸಿದೆ.

Articles You Might Like

Share This Article