Sunday, October 13, 2024
Homeರಾಜ್ಯ"ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ದುರದೃಷ್ಟ"

“ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ದುರದೃಷ್ಟ”

ನವದೆಹಲಿ,ಸೆ.23-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ನಾಡಿನ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರಿಂದ ಇಂತಹ ಹೇಳಿಕೆಯನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಕನಿಷ್ಟಪಕ್ಷ ಶಾಲಾ-ಕಾಲೇಜುಗಳಿಗೆ ಹೋಗುವ ಮಕ್ಕಳನ್ನು ರಾಜಕೀಯದಿಂದ ದೂರ ಇಡುವ ಕೆಲಸ ಮಾಡಬೇಕಿತ್ತು ಎಂದು ಆಕ್ಷೇಪಿಸಿದರು.

ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, ಮತ್ತೊಂದು ಕಡೆ ಇದೇ ಕಾಂಗ್ರೆಸ್ ಸರಕಾರ ಅಕಾರದಲ್ಲಿ ಇದ್ದಾಗ ಪರೀಕ್ಷೆಗೆ ಹೋಗುವ ವಿದ್ಯಾರ್ಥಿ, ವಿದ್ಯಾರ್ಥಿನಿಯರ, ತಾಯಂದಿರ ತಾಳಿ, ಕಾಲುಂಗುರ ತೆಗೆದಿಟ್ಟು ಹೋಗಲು ತಿಳಿಸುತ್ತದೆ. ರಾಜ್ಯ ಸರಕಾರದ ಈ ನಡವಳಿಕೆ ನಿಜವಾಗಿಯೂ ತಲೆತಗ್ಗಿಸುವಂಥದ್ದು. ಬಿಜೆಪಿ, ಇದನ್ನು ಬಲವಾಗಿ ಖಂಡಿಸುತ್ತದೆ ಎಂದರು.

ಮಾತೆತ್ತಿದರೆ ಕಾಂಗ್ರೆಸ್ಸಿಗರು ಅಲ್ಪಸಂಖ್ಯಾತರ ಕುರಿತು ಮಾತ್ರ ಮಾತನಾಡುತ್ತಾರೆ. ಕಾಂಗ್ರೆಸ್ಸಿಗರು, ತುಷ್ಟೀಕರಣ ನೀತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದ ಅವರು, ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯದ ನಂತರ 50ರಿಂದ 60 ವರ್ಷಗಳ ಕಾಲ ದೇಶ, ರಾಜ್ಯವನ್ನು ಆಳಿದೆ. ಆದರೂ, ಅಲ್ಪಸಂಖ್ಯಾತರಲ್ಲಿ ಶೇ.50ರಷ್ಟು ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದರೆ ಅದಕ್ಕೆ ಯಾರು ಹೊಣೆಗಾರರು? ಮುಖ್ಯಮಂತ್ರಿಗಳು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಇವತ್ತಿಗೂ ಕೂಡ ಶೇ 60ಕ್ಕಿಂತ ಹೆಚ್ಚು ಅಲ್ಪಸಂಖ್ಯಾತ ಬಂಧುಗಳು ರಾಜ್ಯ, ದೇಶದಲ್ಲಿ ಕೆಲಸ ಇಲ್ಲದೆ ಬೇಜಬಾಬ್ದಾರಿಯಿಂದ ಓಡಾಡುತ್ತಿದ್ದಾರೆ. ಅದಕ್ಕೆ ಹೊಣೆಗಾರರು ಕಾಂಗ್ರೆಸ್ ಪಕ್ಷದವರಲ್ಲವೇ? ಎಂದು ಪ್ರಶ್ನಿಸಿದರು. ಅಲ್ಪಸಂಖ್ಯಾತರನ್ನು ಮತಬ್ಯಾಂಕ್ ಆಗಿ ಕಾಂಗ್ರೆಸ್ ಪಕ್ಷ ದುರುಪಯೋಗಪಡಿಸಿಕೊಂಡಿದೆ. ಪ್ರಾಮಾಣಿಕವಾಗಿ ಅಲ್ಪಸಂಖ್ಯಾತರನ್ನು ಮೇಲೆತ್ತುವ ಕೆಲಸ ಮಾಡಲಿಲ್ಲ. ಅವರ ಶಿಕ್ಷಣಕ್ಕೆ ಒತ್ತು ಕೊಟ್ಟು ಆರ್ಥಿಕವಾಗಿ ಮೇಲೆತ್ತುವ ಕಾರ್ಯವನ್ನು ಕಾಂಗ್ರೆಸ್ ಮಾಡಲಿಲ್ಲ ಎಂದು ಟೀಕಿಸಿದರು.

ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಲ್ಪಸಂಖ್ಯಾತ ಮಹಿಳೆಯರನ್ನು ಕೂಡ ದೇಶದ ಜನತೆ ಗೌರವದಿಂದ ಕಾಣಬೇಕು. ಪ್ರತಿಯೊಬ್ಬ ಅಲ್ಪಸಂಖ್ಯಾತ ಮಹಿಳೆಯೂ ಗೌರವ, ಸ್ವಾಭಿಮಾನದಿಂದ ಬಾಳಿ ಬದುಕಬೇಕೆಂಬ ದೃಷ್ಟಿಕೋನದೊಂದಿಗೆ ತ್ರಿವಳಿ ತಲಾಖ್‍ನ್ನು ರದ್ದು ಮಾಡಿದ್ದಾರೆ. ನೀವೇನು ಮಾಡಿದ್ದೀರಿ? ಎಂದು ಪ್ರಶ್ನಿಸಿದರು.

ಜ.6 ರಿಂದ ಅಯೋಧ್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾರ್ಯಾರಂಭ

ಅಲ್ಪಸಂಖ್ಯಾತರ ಕುರಿತು ಕೇವಲ ಭಾಷಣ ಮಾಡುತ್ತೀರಿ. ಅವರಿಗಾಗಿ ಯಾವುದಾದರೂ ಯೋಜನೆ ರೂಪಿಸುವ ಮೂಲಕ ಮೇಲೆತ್ತಿದ್ದೀರಾ? ಅಲ್ಪಸಂಖ್ಯಾತರು ನಿರುದ್ಯೋಗ ಸಮಸ್ಯೆ ಸೇರಿ ಅನೇಕ ಸಮಸ್ಯೆಗಳನ್ನು ಎದುರಿಸಲು ಕಾಂಗ್ರೆಸ್ಸೇ ಕಾರಣ ಎಂದು ಆರೋಪಿಸಿದರು.

ರಾಜ್ಯದಲ್ಲಿ ಇವತ್ತು ಭೀಕರ ಬರಗಾಲವಿದೆ. ರೈತರ ಸಂಕಷ್ಟಕ್ಕೆ ಸರಕಾರ ಸ್ಪಂದಿಸುತ್ತಿಲ್ಲ. ಆ ಜವಾಬ್ದಾರಿ ಮರೆತ ರಾಜ್ಯ ಸರಕಾರವು, ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ ಎಂದು ಆಕ್ಷೇಪಿಸಿದರು. ಲೋಕಸಭಾ ಚುನಾವಣೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ 20 ಕ್ಷೇತ್ರ ಗೆಲ್ಲುವ ಕನಸು ಕಾಣುತ್ತಿದೆ. ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಮೂಲಕ ಈ ದೇಶದ ಪ್ರಜ್ಞಾವಂತ ಮತದಾರರು, ಕಾಂಗ್ರೆಸ್ ಪಕ್ಷದ ಬೂಟಾಟಿಕೆಯ ಗ್ಯಾರಂಟಿಯನ್ನು ನಂಬುವುದಿಲ್ಲ. ಅದರ ಬದಲು ಮೋದಿ ಗ್ಯಾರಂಟಿಯನ್ನು ನಂಬುವುದು ರುಜುವಾತಾಗಿದೆ ಎಂದರು.

ಕಾಂಗ್ರೆಸ್ ಪಕ್ಷ ಹತಾಶೆಯಿಂದ ಸಮಾಜ ಸಮಾಜದ ಮಧ್ಯೆ, ಧರ್ಮ ಧರ್ಮದ ನಡುವೆ ವಿಷಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಸರಕಾರದ ಒಡೆದಾಳುವ ನೀತಿಯನ್ನು ಬಿಜೆಪಿ ಖಂಡಿಸುತ್ತದೆ. ಶಾಲಾ ಮಕ್ಕಳಿಂದ ಶೌಚಾಲಯ ಶುಚಿಗೊಳಿಸಿದ ಘಟನೆಯು ಕಾನೂನು ಸುವ್ಯವಸ್ಥೆ ಕುಸಿದುದರ ಸಂಕೇತ. ರಾಜ್ಯದಲ್ಲಿ ಸಿಎಂ ಇದ್ದಾರಾ? ಸಚಿವರು ಇದ್ದಾರಾ? ಎಂದು ಪ್ರಶ್ನಿಸುವಂತಾಗಿದೆ. ಬರಗಾಲವಿದ್ದರೂ ಸಚಿವರು ಅಕಾರಿಗಳ ಸಭೆ ನಡೆಸಿಲ್ಲ.

ಈ ಬೇಜಾವಾಬ್ದಾರಿ ನಡೆ ಒಂದು ಕಡೆ ಇದ್ದರೆ, ಇನ್ನೊಂದೆಡೆ ಹಿಜಾಬ್ ಅವಕಾಶ ಕೊಡುವುದಾಗಿ ಹೇಳಿದ್ದಾರೆ. ಹಿಂದೂ ಹೆಣ್ಮಕ್ಕಳ ತಾಳಿ, ಕಾಲುಂಗುರ ತೆಗೆಸುತ್ತಾರೆ. ನಿಮ್ಮ ಉದ್ದೇಶ ಏನು? ಎಂದು ಕೇಳಿದರು. ಒಡೆದಾಳುವ ನೀತಿಯನ್ನು ಕೈಬಿಡಿ ನೀವು ಆರೂವರೆ ಕೋಟಿ ಜನರ ಸಿಎಂ ಎಂಬುದನ್ನು ನೆನಪಿಡಿ ಎಂದು ಆಗ್ರಹಿಸಿದರು.

RELATED ARTICLES

Latest News