Thursday, February 22, 2024
Homeರಾಜಕೀಯಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ : ಬಿಜೆಪಿ

ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ : ಬಿಜೆಪಿ

ಬೆಂಗಳೂರು,ಡಿ.23- ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಅವರ ಗ್ಯಾರಂಟಿ ಎಂದು ಬಿಜೆಪಿ ಕಿಡಿಕಾರಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯನವರ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್‍ಗೆ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಶಾಲೆ-ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೆ, ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಭೇದವನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಆರೋಪಿಸಿದೆ.

ಪಿಎಫ್‍ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‍ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದೆ.

ಜ.6 ರಿಂದ ಅಯೋಧ್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾರ್ಯಾರಂಭ

ವಿಜಯೇಂದ್ರ ಕಿಡಿ:
ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಸರ್ಕಾರದ ನಿರ್ಧಾರದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಯುವ ಮನಸ್ಸುಗಳನ್ನು ಧಾರ್ಮಿಕ ಆಧಾರದ ಮೇಲೆ ವಿಭಜಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರವು ನಮ್ಮ ಶೈಕ್ಷಣಿಕ ಸಂಸ್ಥೆಗಳ ಜಾತ್ಯತೀತ ಸ್ವರೂಪದ ಬಗ್ಗೆ ಕಳವಳ ಸೃಷ್ಟಿಸುವಂಥದ್ದು. ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಉಡುಗೆಗೆ ಅವಕಾಶ ನೀಡುವ ಮೂಲಕ ಸಿದ್ದರಾಮಯ್ಯ ಸರ್ಕಾರವು ಯುವ ಮನಸ್ಸುಗಳನ್ನು ಧಾರ್ಮಿಕವಾಗಿ ಒಡೆಯುವುದನ್ನು ಉತ್ತೇಜಿಸುತ್ತಿದೆ. ಇದು ಅಂತರ್ಗತ ಕಲಿಕೆಯ ವಾತಾವರಣವನ್ನು ತಡೆಯುತ್ತದೆ. ಧಾರ್ಮಿಕ ಆಚರಣೆಗಳ ಪ್ರಭಾವವಿಲ್ಲದೆ ವಿದ್ಯಾರ್ಥಿಗಳು ಶಿಕ್ಷಣದ ಮೇಲೆ ಗಮನ ಕೇಂದ್ರೀಕರಿಸುವ ವಾತಾವರಣವನ್ನು ನಿರ್ಮಿಸಬೇಕಾದ ಅಗತ್ಯವಿದೆ ಎಂದು ವಿಜಯೇಂದ್ರ ಉಲ್ಲೇಖಿಸಿದ್ದಾರೆ.

ದಿಕ್ಕು ತಪ್ಪಿಸುವ ಕೆಲಸ:
ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ. ಗ್ಯಾರಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದಾಮಯ್ಯನವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ ವರ್ಷ ಹಿಜಾಬ್ ವಿವಾದದ ಸಂದರ್ಭದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರು ಸರ್ಕಾರದ ನಿರ್ಧಾರವನ್ನು ಕಾನೂನಾತ್ಮಕವಾಗಿ ಎದುರಿಸಲು ಬಿಜೆಪಿ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

RELATED ARTICLES

Latest News