ನವದೆಹಲಿ,ಆ.29- ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿರುವ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್‍ನ ನಿರಾಕರಿಸಿದ್ದು, ರಾಜ್ಯ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ, ಸುಧಾಂಶ ಗುಹಾಲಿಯ ಅವರಿದ್ದ ಪೀಠ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮನವಿಗಳನ್ನು ವಿಚಾರಣೆ ನಡೆಸಿದೆ.
ಅರ್ಜಿ ಸಲ್ಲಿಸಿದ್ದ ಹಲವಾರು ಮಂದಿ ಹೈಕೋರ್ಟ್ ಆದೇಶಕ್ಕೆ ತಡೆಯಾಗಜ್ಞೆ ನೀಡಲು ನಿರಾಕರಿಸಿದ್ದರು. ಕಳೆದ ಫೆಬ್ರವರಿಯಲ್ಲಿ ಕರಾವಳಿ ಭಾಗದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ತಲೆ ಎತ್ತಿತ್ತು.
ಶಾಲೆಗಳಲ್ಲಿಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಮುಸ್ಲಿಂ ಸಮುದಾಯಗಳವಿದ್ಯಾರ್ಥಿಗಳು ಪ್ರತಿಪಾದಿಸಿದ್ದರು. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ನಡುವೆ ರಾಜ್ಯ ಸರ್ಕಾರ ಧಾರ್ಮಿಕ ಆಚರಣೆಗೆ ಮತ್ತು ಧರ್ಮ ಪ್ರತಿಪಾದಿಸುವ ಚಿಹ್ನೆಗಳ ಬಳಕೆಗೆ ಅವಕಾಶ ನಿರಾಕರಿಸಿ ಆದೇಶ ಹೊರಡಿಸಿತ್ತು.
ಹೈಕೋರ್ಟ್‍ನಲ್ಲೂ ತೀವ್ರ ವಿಚಾರಣೆ ನಡೆದು ಮುಖ್ಯ ನ್ಯಾಯಮೂರ್ತಿಗಳಾಗಿದ್ದ ರಿತುರಾಜ್ ಆವಸ್ತಿ, ಕೃಷ್ಣ.ಎಸ್. ದೀಕ್ಷಿತ್. ಜೆ.ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು.
ಇದನ್ನು ಪ್ರಶ್ನಿಸಿ ಹಲವಾರು ಮಂದಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಇದರ ವಿಚಾರಣೆ ನಡೆಸಿರುವ ಹೇಮಂತ್ ಗುಪ್ತ ಅವರ ಗುಪ್ತ, ನಾವು ಇಂತಹ ನಡವಳಿಕೆಗಳನ್ನು ಅನುಮತಿಸುವುದಿಲ್ಲ. ನೀವು ತುರ್ತು ವಿಚಾರಣೆಗೆ ಬಯಸಿದ್ದೀರಿ ಈಗ ಪ್ರಕರಣವನ್ನು ಮುಂದೂಡಬೇಕೆಂದು ಹೇಳುತ್ತಿದ್ದೀರಾ ಈ ರೀತಿಯ ನಡವಳಿಕೆಗಳಿಗೆ ನಾವು ಅವಕಾಶ ನೀಡುವುದಿಲ್ಲ ಎಂದು ನ್ಯಾಯಾಲಯ ಖಾರವಾಗಿ ಪ್ರತಿಕ್ರಿಯಿಸಿದೆ. ಮುಂದಿನ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಲಾಗಿದೆ.