ನಾಗ್ಪುರ,ಜ.15- ಬೆಳಗಾವಿಯ ಹಿಂಡಲಗಾ ಜೈಲಿನಿಂದ ಆರೋಪಿಯೊಬ್ಬ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತೀನ್ ಗಡ್ಕರಿ ಅವರಿ ಕಚೇರಿಗೆ ಬೆದರಿಕೆ ಕರೆ ಮಾಡಿರುವುದನ್ನು ಪೊಲೀಸರು ಪತ್ತೆ ಹಚ್ಚಿರುವ ಪೊಲೀಸರು ಆತನಿಂದ ಕೆಲ ಡೈರಿಗಳನ್ನು ವಶಪಡಿಸಿಕೊಂಡಿದ್ದಾರೆ.
ನಿನ್ನೆ ಬೆಳಗ್ಗೆ 11.30ರ ಸುಮಾರಿಗೆ ಕೇಂದ್ರ ಸಚಿವರ ನಾಗ್ಪುರ ಕಚೇರಿಯ ಲ್ಯಾಂಡ್ ಲೈನ್ಗೆ ಮೂರು ಬಾರಿ ಕರೆ ಬಂದಿತ್ತು. ನೂರು ಕೋಟಿ ರೂಪಾಯಿಗಳನ್ನು ನೀಡದೆ ಇದ್ದರೆ ಕಚೇರಿಯನ್ನು ಸೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ಕೆಲ ಕಾಲ ಇದು ಆತಂಕ ಮೂಡಿಸಿತ್ತು.
ಆರಂಭದಲ್ಲಿ ಪಾಕಿಸ್ತಾನದಲ್ಲಿ ತಲೆ ಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬೆಂಬಲಿಗರು ಕರೆ ಮಾಡಿರಬಹುದು ಎಂದು ಶಂಕಿಸಲಾಗಿತ್ತು. ನಂತರ ಪರಿಶೀಲನೆಯ ವೇಳೆ ಕರ್ನಾಟಕದ ಹುಬ್ಬಳ್ಳಿಯಿಂದ ಕರೆ ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ.
ಮುಂದುವರೆದ ತನಿಖೆಯಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಜಯೇಶ್ ಕಾಂತಂಕ್ ಕರೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಕೊಲೆ ಪ್ರಕರಣದಲ್ಲಿ ಮರಣದಂಡನೆಗೆ ಒಳಗಾಗಿರುವ ಜಯೇಶ್ನನ್ನು ನಾಗ್ಪುರ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆತನ ಬಳಿಯಿಂದ ಕೆಲ ಡೈರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಾಗ್ಪುರ ಪೊಲೀಸ್ ಆಯುಕ್ತ ಅಮಿತ್ ಕುಮಾರ್ ತಿಳಿಸಿದ್ದಾರೆ.
#HindalgaJail, #inmate, #makes, #threatcalls, #UnionMinister, #NitinGadkari,