ಮೈಸೂರು,ಆ.4- ಕಳೆದ 5 ತಿಂಗಳ ಹಿಂದೆ ನಂಜನಗೂಡು ತಾಲ್ಲೂಕಿನ ಮಹದೇವನಗರದಲ್ಲಿ ನಡೆದಿದ್ದ ಹಿಂದಿ ಶಿಕ್ಷಕಿ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೊರಾರ್ಜಿ ವಸತಿ ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ ಸುಲೋಚನ ಮಾ.9ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ತನಿಖೆ ನಡೆಸಿದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದರು. ಕೊನೆಗೂ ಕೊಲೆ ರಹಸ್ಯ ಭೇದಿಸುವಲ್ಲಿ ಪೊಲೀಸರು, ನಂಜನಗೂಡು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಕ್ರಮ ಸಂಬಂಧದಿಂದಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ಗಾಯತ್ರಿ ಮುರುಗೇಶ್ ಹಾಗೂ ಆಕೆಯ ಒಡನಾಡಿಗಳಾದ ಭಾಗ್ಯ, ನಾಗಮ್ಮ ಹಾಗೂ ಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.