Monday, April 28, 2025
Homeರಾಜ್ಯಹುಬ್ಬಳ್ಳಿಯಲ್ಲಿ ಹಿಂದೂ ಅಪ್ರಾಪ್ತೆ ಮೇಲೆ ಅನ್ಯಕೋಮಿನ ಯುವಕ ಅತ್ಯಚಾರ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಹುಬ್ಬಳ್ಳಿಯಲ್ಲಿ ಹಿಂದೂ ಅಪ್ರಾಪ್ತೆ ಮೇಲೆ ಅನ್ಯಕೋಮಿನ ಯುವಕ ಅತ್ಯಚಾರ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು,ಮೇ4-ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್‌ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣುಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ ಎಂದು ವಾಗ್ದಾಳಿ ನಡೆಸಿದೆ.

ಪ್ರಕರಣ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ರಾಜ್ಯ ಬಿಜೆಪಿ, ತಾಲಿಬಾನಿ ಕಾಂಗ್ರೆಸ್‌ ಸರ್ಕಾರದಲ್ಲಿ ಹಿಂದೂಗಳಿಗೆ ಇಲ್ಲ ಸುರಕ್ಷತೆ. ಕಾಂಗ್ರೆಸ್‌ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣು ಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ ಎಂದು ಗಂಭೀರ ಆರೋಪ ಮಾಡಿದೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ. ಈ ಹಿಂದೂ ವಿರೋಧಿ ಸರ್ಕಾರ ತೊಲಗಬೇಕು ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.

ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವಶಕ್ಕೆ ಪಡೆಯುವ ಸಂದರ್ಭದಲ್ಲಿ ಆರೋಪಿಯು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ವೇಳೆ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಬಂಧಿಸಿದ್ದಾರೆ.

RELATED ARTICLES

Latest News