ರಾಜ್ಯದಲ್ಲಿ ಮತ್ತೆ ಜೋರಾಯ್ತು ಧರ್ಮ ದಂಗಲ್

Social Share

ಬೆಂಗಳೂರು,ನ.24- ರಾಜ್ಯದಲ್ಲಿ ಮತ್ತೆ ಧರ್ಮ ದಂಗಲ್ ಆರಂಭವಾಗುವ ಮುನ್ಸೂಚನೆಗಳು ಗೋಚರಿಸುತ್ತಿವೆ.
ರಾಜ್ಯದಲ್ಲಿ ನಡೆಯುವ ದೇವರ ಜಾತ್ರೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುವಂತೆ ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.

ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಹಿಂದೂ ಧರ್ಮದ ವ್ಯಾಪಾರಸ್ಥರಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಹಿಂದೂ ಜನಜಾಗೃತಿ ಸಮಿತಿ ಅಧ್ಯಕ್ಷ ಮೋಹನ್‍ಗೌಡ ಧಾರ್ಮಿಕ ದತ್ತಿ ಇಲಾಖೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಕಾರ್ತಿಕ ಕಡೆ ಸೋಮವಾರ ನಗರದ ಬಸವನಗುಡಿಯಲ್ಲಿ ನಡೆದ ಕಡಲೆಕಾಯಿ ಪರಿಷೆ ಸಂದರ್ಭದಲ್ಲಿ ಅನ್ಯ ಧರ್ಮಿಯರು ವ್ಯಾಪಾರ ವಹಿವಾಟುಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಮತ್ತೆ ಧರ್ಮ ದಂಗಲ್ ಆರಂಭವಾಗುವ ಸಾಧ್ಯತೆಗಳಿವೆ.

ಬೆಂಗಳೂರು ಸೇರಿ ರಾಜ್ಯದಾದ್ಯಂತ ಇನ್ನೂ 2 ದಿನ ಜಿಟಿಜಿಟಿ ಮಳೆ

ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಭಾಗದಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವಗಳ ಸಂದರ್ಭದಲ್ಲಿ ದೇವಸ್ಥಾನಗಳ ಆವರಣದೊಳಗೆ ಕೇವಲ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ.

2002 ರ ಧಾರ್ಮಿಕ ದತ್ತಿ ಇಲಾಖೆ ಕಾಯ್ದೆಯಲ್ಲಿಯೂ ಈ ಬಗ್ಗೆ ಉಲ್ಲೇಖವಿದ್ದು ಸರ್ಕಾರ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮೋಹನ್‍ಗೌಡ ಆಗ್ರಹಿಸಿದ್ದಾರೆ. ಇದೇ ತಿಂಗಳು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುವ ಚಂಪಕ ಷಷ್ಠಿ ಆಚರಣೆಯ ಸಂದರ್ಭದಲ್ಲಿ ಯಾವುದೇ ಕಾರಣಕ್ಕೆ ಅನ್ಯ ಧರ್ಮಿಯ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.

ಬಾಲಿವುಡ್ ಹಿರಿಯ ನಟ ವಿಕ್ರಂ ಗೋಖಲೆ ನಿಧನ

ಚಂಪಕ ಷಷ್ಟಿಯಲ್ಲಿ ಅನ್ಯ ಧರ್ಮಿಯರು ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡಬಾರದು ಎಂದು ಆಗ್ರಹಿಸಿರುವ ಹಿಂದೂ ಸಂಘಟನೆಗಳ ಆಗ್ರಹಕ್ಕೆ ಮುಸಲ್ಮಾನ್ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ.
ಯಾರೋ ಒಬ್ಬ ಮುಸ್ಲೀಂ ವ್ಯಕ್ತಿ ತಪ್ಪು ಮಾಡಿದರೆ ಅದು ನಮ್ಮ ಸಮುದಾಯದ ಎಲ್ಲರಿಗೂ ಅನ್ವಯಿಸುವುದಿಲ್ಲ ಹೀಗಾಗಿ ಸರ್ಕಾರ ಧರ್ಮ ದಂಗಲ್‍ಗೆ ಅವಕಾಶ ನೀಡಬಾರದು ಎಂದು ಮುಸ್ಲಿಂ ಮುಖಂಡ ಮಹಮ್ಮದ್ ಖಾಲಿದ್ ಮನವಿ ಮಾಡಿಕೊಂಡಿದ್ದಾರೆ.

ಮುಸ್ಲಿಂ ವ್ಯಾಪಾರ ವಿರೋಧ ಮಾಡ್ತೀರಾ ಅಂದ್ರೆ ಮುಸ್ಲಿಂ ರಾಷ್ಟ್ರಗಳಿಂದ ನೀವು ಯಾವುದನ್ನು ಖರೀದಿ ಮಾಡ್ಬೇಡಿ. ಒಂದು ಸಮಾಜ ಶಾಂತಿಯಿಂದ ಇರಬೇಕು ಅಂದ್ರೆ ಎಲ್ಲ ಧರ್ಮಿಯರು ಸಹೋದರರಂತೆ ಬಾಳ್ವೆ ನಡೆಸುವುದರಿಂದ ಮಾತ್ರ ಸಾಧ್ಯ ಎಂದು ಖಾಲಿದ್ ಅಭಿಪ್ರಾಯಪಟ್ಟಿದ್ದಾರೆ.

Hindu, religious, events, businessmen,

Articles You Might Like

Share This Article