ಹಿಂದೂಗಳನ್ನು ನಿಂದಿಸಿದ ಕಾಂಗ್ರೆಸ್‌ನನ್ನು ಜನತೆ ಕ್ಷಮಿಸುವುದಿಲ್ಲ: ಅರುಣ್ ಸಿಂಗ್

Social Share

ಬೆಂಗಳೂರು,ನ.8- ಹಿಂದೂಗಳನ್ನು ನಿಂದಿಸಿದ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನತೆ ಯಾವತ್ತೂ ಕ್ಷಮಿಸುವುದಿಲ್ಲ ಜನರು ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಸರಿಯಾದ ಉತ್ತರ ಕೊಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪ್ರಾಚೀನ- ಶ್ರೇಷ್ಠ ಸಂಸ್ಕøತಿ ಮತ್ತು ಧರ್ಮವನ್ನು ಕಾಂಗ್ರೆಸ್ ಹೀಯಾಳಿಸುವ ಕೆಲಸ ಮಾಡುತ್ತಲೇ ಇದೆ. ಈ ರೀತಿಯ ನಿಂದನೆ ಅಕ್ಷಮ ಎಂದು ಗುಡುಗಿದರು.

BIG NEWS: ವಿಶ್ವಕಪ್‍ ಸೆಮಿಫೈನಲ್‌ನಿಂದ ರೋಹಿತ್ ಶರ್ಮಾ ಔಟ್?

ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪಕ್ಷ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ ಅವರಿಂದ ರಾಜೀನಾಮೆ ಪಡೆಯಬೇಕು. ಇಲ್ಲವಾದರೆ ರಾಹುಲ್ ಗಾಂಧಿ, ಸ್ಥಳೀಯರೇ ಆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರು ಹಿಂದೂಗಳ ಅವಹೇಳನವನ್ನು ಸಮರ್ಥಿಸಿದಂತಾಗುತ್ತದೆ ಕಿಡಿಕಾರಿದರು.

ಕಾಂಗ್ರೆಸ್ ಪಕ್ಷದಲ್ಲಿ ತಾಕತ್ತು ಉಳಿದಿಲ್ಲ. ಆ ಪಕ್ಷ ಸಂಪೂರ್ಣ ದುರ್ಬಲವಾಗಿದೆ. ಆದ್ದರಿಂದ ಕರ್ನಾಟಕದಲ್ಲಿ ಗೆಲ್ಲುವ ಕುರಿತು ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರ ಮಾತಿಗೆ ಯಾವುದೇ ಮಹತ್ವ ಇಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷದ ನಾಮಾವಶೇಷ ಆಗಲಿದೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಗೆದ್ದಿಲ್ಲ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲೂ ಕಾಂಗ್ರೆಸ್ ಪಕ್ಷ ಸೋಲಲಿದೆ. ಎಲ್ಲ ಕಡೆ ಬಿಜೆಪಿ ಗೆಲ್ಲುತ್ತ ಸಾಗಲಿದೆ. ಕರ್ನಾಟಕದಲ್ಲೂ ಬಿಜೆಪಿ ಜಯ ಸಾಧಿಸಲಿದೆ ಎಂದರು.

ಶೇ.10ರಷ್ಟು ಮೀಸಲಾತಿ : ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಕಾರ್ಯಕ್ಕೆ ಸಂದ ಜಯ

ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರು ಪ್ರವಾಸ ಮಾಡುತ್ತಿದ್ದಾರೆ. ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಚರ್ಚಿಸುತ್ತಿದ್ದೇವೆ. ಸಶಕ್ತ ಬೂತ್ ಮಟ್ಟದ ಕಾರ್ಯಕರ್ತರಿಂದ ಪಕ್ಷ ಗೆಲ್ಲುತ್ತದೆ. ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ನಾವು ಗಮನಾರ್ಹ ರೀತಿಯಲ್ಲಿ ಕೆಲಸ ಮಾಡಿದ್ದೇವೆ. ನಾವು ಮಾಡಿರುವ ಕೆಲಸ ನೋಡಿ ಜನತೆ ಮುಂದಿನ ಬಾರಿ ಬಿಜೆಪಿಗೇ ಅಕಾರ ನೀಡಲಿದ್ದಾರೆ. ರಾಜ್ಯದ ಎಲ್ಲ ಸಚಿವರು ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

ಪ್ರಧಾನಿ ನರೇಂದ್ರಮೋದಿಜಿ ಮತ್ತು ಕಾಮನ್‍ಮ್ಯಾನ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಯೋಜನೆಗಳು ಹಾಗೂ ಅವರ ಕಾರ್ಯ ವೈಖರಿಯನ್ನು ರಾಜ್ಯದ ಜನರು ಮೆಚ್ಚಿಕೊಂಡಿದ್ದಾರೆ. ಆದ್ದರಿಂದ ಮುಂದಿನ ಬಾರಿಯೂ ರಾಜ್ಯದಲ್ಲಿ ನಮ್ಮದೇ ಸರ್ಕಾರವಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Articles You Might Like

Share This Article