Wednesday, September 17, 2025
Homeರಾಷ್ಟ್ರೀಯ | Nationalಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ

ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ

ಪುಣೆ, ಮಾ 17- ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಘಟನೆ ಪುಣೆ ಜಿಲ್ಲೆಯ ಇಂದಾಪುರ ಪ್ರದೇಶದಲ್ಲಿ ಕಳೆದ ರಾತ್ರಿ ನಡೆದಿದೆ.ಮೃತರನ್ನು ಅವಿನಾಶ್ ಧನ್ವೆ ಎಂದು ಗುರುತಿಸಲಾಗಿದ್ದು, ಸುಮಾರು 8 ಜನರ ಗುಂಪು ಏಕಾ ಏಕಿ ಆತನ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಗೆ ಹೆಳೇ ದ್ವೇಷದ ಕಾರಣ ಎಂದು ಹೇಳಲಾಗುತ್ತಿದೆ,ಸಿಸಿಟಿವಿ ದೃಶ್ಯಾವಳಿಯಲ್ಲಿ ಈ ಭೀಕರ ಘಟನೆಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ.ಹಂತರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪುಣೆ ಗ್ರಾಮಾಂತರ ಪೊಲೀಸ್ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈತನ ಮೇಲೆ ಅನೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು .ಪ್ರಾಥಮಿಕ ಮಾಹಿತ ಪ್ರಕಾರ ಪ್ರತಿಸ್ರ್ಪಗುಂಪಿನೊಂದಿಗಿನ ದ್ವೇಷ ಹತ್ಯೆಗೆ ಕಾರಣವೆಂದು ತೋರುತ್ತದೆ, ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

RELATED ARTICLES

Latest News