Friday, June 14, 2024
Homeರಾಜ್ಯಸಚಿವ ಬಿ.ನಾಗೇಂದ್ರ ಕುರಿತು ಸಿಎಂ, ಡಿಸಿಎಂ ನಿರ್ಧಾರಕ್ಕೆ ನಾನು ಬದ್ಧ : ಎಚ್‌.ಕೆ.ಪಾಟೀಲ್‌

ಸಚಿವ ಬಿ.ನಾಗೇಂದ್ರ ಕುರಿತು ಸಿಎಂ, ಡಿಸಿಎಂ ನಿರ್ಧಾರಕ್ಕೆ ನಾನು ಬದ್ಧ : ಎಚ್‌.ಕೆ.ಪಾಟೀಲ್‌

ಬೆಂಗಳೂರು, ಜೂ.3- ವಾಲೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸಚಿವ ಬಿ.ನಾಗೇಂದ್ರ ಅವರ ಕುರಿತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವು ಬದ್ಧ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಕಾಂಗ್ರೆಸ್‌‍ ಶಾಸಕಾಂಗ ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾಗಿವೆ. ಅದರಲ್ಲಿ ಬಿ.ನಾಗೇಂದ್ರ ಅವರ ಪ್ರಕರಣ ಕುರಿತು ವಿಚಾರ ವಿನಿಮಯವಾಗಿದೆ. ಅವರ ವಿಚಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗಿದ್ದೇವೆ. ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡಿ ಎಂದರು.

ಚುನಾವಣೋತ್ತರ ಸಮೀಕ್ಷಾ ವರದಿಗಳು ಹುಸಿಯಾಗಲಿವೆ. ಕರ್ನಾಟಕದಲ್ಲಿ ಕಾಂಗ್ರೆಸ್‌‍ ಪಕ್ಷ 16ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಈಗಾಗಲೇ ಕಾಂಗ್ರೆಸ್‌‍ ಪಕ್ಷ ಮಾತ್ರವಲ್ಲದೆ, ಹಲವಾರು ತಜ್ಞರು ಕಾಂಗ್ರೆಸ್‌‍ ಪರವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಆದರೆ ಚುನಾವಣೋತ್ತರ ಸಮೀಕ್ಷಾ ವರದಿಗಳು ಒಂದು ಪಕ್ಷಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಪ್ರಕಟವಾಗಿವೆ ಎಂದರು.

ನಾವು ಇದನ್ನು ನಂಬುವುದಿಲ್ಲ. ಪ್ರಜಾಪ್ರಭುತ್ವಕ್ಕೆ ಗೆಲುವಾಗುವ ವಿಶ್ವಾಸವಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಸಾಕಷ್ಟು ಸತ್ಯಾಂಶಗಳನ್ನು ಹುಡುಕಲಾಗಿದೆ. ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ಹಲವು ಕಡೆ ಕಾಂಗ್ರೆಸ್‌‍ಗೆ ನಕಾರಾತಕವಾಗಿ ಬಿಂಬಿಸಲಾಗಿದೆ ಎಂದು ಹೇಳಿದರು.

RELATED ARTICLES

Latest News