Sunday, October 19, 2025
Homeರಾಜ್ಯದೊಣ್ಣೆ ಹಿಡಿದು ಭಯ ಹುಟ್ಟಿಸಬಹುವುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ : ಹರಿಪ್ರಸಾದ್‌

ದೊಣ್ಣೆ ಹಿಡಿದು ಭಯ ಹುಟ್ಟಿಸಬಹುವುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ : ಹರಿಪ್ರಸಾದ್‌

Holding a stick can only instill fear, not hope: Hariprasad

ಬೆಂಗಳೂರು, ಅ.19– ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌‍ನ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ತಿರುಗೇಟು ನೀಡಿದ್ದಾರೆ.

ತಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರಿಗೆ ತಿರುಗೇಟು ನೀಡಿದ್ದಾರೆ.ದೇಶದ ಜನರಲ್ಲಿ ಆತವಿಶ್ವಾಸ, ಧೈರ್ಯ, ಭರವಸೆ ಮೂಡಿಸಿರುವುದು ಬಾಬಾ ಸಾಹೇಬರು ನೀಡಿರುವ ಸಂವಿಧಾನದಿಂದ ಮಾತ್ರ. ಪಥ ಸಂಚಲನ ಸಾಗುವ ದ್ವೇಷದ ಬೀದಿಯಲ್ಲಿ ಪ್ರೀತಿ ಹುಟ್ಟುವುದಾದರೂ ಹೇಗೆ? ದೊಣ್ಣೆ, ಲಾಠಿ, ಬೂಟಿನ ಪಥ ಸಂಚಲನದಿಂದ ಸಮಾಜದಲ್ಲಿ ಭಯ, ದ್ವೇಷದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದಿದ್ದಾರೆ.

ಪಥ ಸಂಚಲನದ ಉದ್ದೇಶವೇ ಭಯದ ವಾತಾವರಣದ ನಿರ್ಮಾಣ ಎನ್ನುವುದು ಸ್ಪಷ್ಟ. ಆರ್‌.ಎಸ್‌‍.ಎಸ್‌‍ ಪೇಯ್‌್ಡ ಸಂಘಟನೆಯಲ್ಲ ಎಂದಾದರೆ ದೇಶ-ವಿದೇಶಿ ಮೂಲದಿಂದಲೂ ಹರಿದು ಬರುತ್ತಿರುವ ಹಣಕ್ಕೆ ಹೊಣೆ ಯಾರು? ಸಮಾಜ ಸೇವೆ ಮಾಡಲು ಆರ್‌.ಎಸ್‌‍.ಎಸ್‌‍ ಸರ್ಕಾರಿ ಸಂಸ್ಥೆಯೂ ಅಲ್ಲ, ಸರ್ಕಾರೇತರ ಸಂಸ್ಥೆಯೂ ಅಲ್ಲ, ಕನಿಷ್ಠ ಪಕ್ಷ ನೋಂದಾವಣಿಯೂ ಆಗಿಲ್ಲ. ಹಾಗಾದರೆ ಇದೊಂದು ಭೂಗತ ಸಂಘಟನೆ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ವಿದೇಶದಿಂದ ಆರ್‌ಎಸ್‌‍ಎಸ್‌‍ಗೆ ಮಾತ್ರ ಹಣ ಬರಲಿ ಎಂಬ ಕಾರಣಕ್ಕಾಗಿಯೇ ಅಲ್ಲವೇ ಎನ್‌.ಜಿ.ಓ.ಗಳಿಗೆ ವಿದೇಶಿ ಫಂಡ್‌ ಬರುವುದನ್ನು ನಿಲ್ಲಿಸಿರುವುದು. ನೂರು ವರ್ಷದ ಇತಿಹಾಸದಲ್ಲಿ ದೊಣ್ಣೆ ಹಿಡಿದು ಸಾಗಿರುವ ಪಥ ಸಂಚಲನದಿಂದ ಸಮಾಜಕ್ಕೆ ಆಗಿರುವ ಲಾಭವೇನು? ಎಂದು ಕಿಡಿಕಾರಿದ್ದಾರೆ.

ಹಾದಿ ಬೀದಿಯಲ್ಲಿ ದೊಣ್ಣೆ ಹಿಡಿದು ಶಾಂತಿ-ಸುವ್ಯಸ್ಥೆಯನ್ನು ಹಾಳು ಮಾಡಿದ್ದೇ ಸಾಧನೆಯೇ? ದೊಣ್ಣೆ ಜನರ ಕೈಗೆ ಸಿಕ್ಕಿ ಬಡಿಸಿಕೊಳ್ಳಬೇಡಿ, ಬೇಗ ಎಚ್ಚೆತ್ತುಕೊಳ್ಳದಿದ್ದರೆ ಸಂಘಕ್ಕೆ ಉಳಿಗಾಲವಿಲ್ಲ ಎಂದು ಅವರು ಹೇಳಿದ್ದಾರೆ.

RELATED ARTICLES

Latest News