“ಪಾದಯಾತ್ರೆ ಕೊರೊನಾಯಾತ್ರೆ ಆಗೋದು ಬೇಡ, ದಯವಿಟ್ಟು ರಾಜಕೀಯ ಉದ್ದೇಶದ ನಡಿಗೆ ನಿಲ್ಲಿಸಿ”

Social Share

ಬೆಂಗಳೂರು, ಜ.12- ಪಾದಯಾತ್ರೆ ಕೊರೊನಾ ಯಾತ್ರೆ ಆಗುವುದು ಬೇಡ. ದಯವಿಟ್ಟು ನಿಮ್ಮ ರಾಜಕೀಯ ಉದ್ದೇಶದ ನಡಿಗೆ ಕಾರ್ಯಕ್ರಮವನ್ನು ಕೈಬಿಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ.
ಆರಂಭದಲ್ಲಿ ಇವರು ಪಾದಯಾತ್ರೆ ಆರಂಭಿಸಿದಾಗ, ನಮಗೆ ಸಾರ್ವಜನಿಕರ ಆರೋಗ್ಯದ ಮೇಲೆ ಬೀರಬಹುದಾದ ಅಡ್ಡ ಪರಿಣಾಮದ ಬಗ್ಗೆ ಆತಂಕ ಇತ್ತು. ಆ ಕಾರಣದಿಂದ ಕಾರ್ಯಕ್ರಮವನ್ನು ಮುಂದೆ ಹಾಕಿಕೊಳ್ಳಿ ಎಂದು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾವು. ಈಗ ನಮ್ಮ ಆತಂಕ ನಿಜವಾಗುತ್ತಿದೆ.
ಕೊರೊನಾ ಬಗ್ಗೆ ಕಾಂಗ್ರೆಸ್ ನಾಯಕರು ಅಪ ಪ್ರಚಾರ ಮಾಡುತ್ತಿರುವುದಲ್ಲದೆ ವಿತಂಡವಾದ ಮಾಡುತ್ತಿದ್ದಾರೆ ಎಂದು ಹೇಳಿದರು. ಪಾದಯಾತ್ರೆಯಲ್ಲಿ ತೊಡಗಿಕೊಂಡಿದ್ದ ಕೆಲವು ನಾಯಕರಿಗೆ ಸೋಂಕು ತಗುಲಿದ್ದು, ಆಸ್ಪತ್ರೆ ಸೇರಿದ್ದಾರೆ. ಆ ಕಾರಣದಿಂದ ಮತ್ತೊಮ್ಮೆ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡುತ್ತೇನೆ.
ಸಾರ್ವಜನಿಕರ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಪಾದಯಾತ್ರೆಯನ್ನು ಕೈಬಿಡಿ. ಕೊರೊನಾ ಅಪಾಯಕಾರಿ ರೀತಿಯಲ್ಲಿ ಹರಡುತ್ತಿದ್ದು, ಎಲ್ಲ ವರ್ಗದವರೂ ಆತಂಕಗೊಂಡಿದ್ದಾರೆ. ಈಗಾಗಲೇ ನೀವು ಜನತೆಯ ಆಕ್ರೋಶಕ್ಕೆ ಗುರಿಯಾಗಿದ್ದು, ಅವರ ಕ್ಷಮೆ ಕೇಳಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Articles You Might Like

Share This Article