ಲಾಕ್‍ಡೌನ್ ಮುನ್ಸೂಚನೆ ನೀಡಿದ ಗೃಹ ಸಚಿವ ಜ್ಞಾನೇಂದ್ರ..?

Social Share

ಬೆಂಗಳೂರು, ಜ.10- ಒಂದು ವೇಳೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದರೆ ವಿಧಿಯಿಲ್ಲದೆ ಲಾಕ್‍ಡೌನ್ ಜಾರಿ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. ಕೋವಿಡ್ ಸೋಂಕನ್ನು ತಡೆಗಟ್ಟಲು ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತದೆ. ಆದರೆ ಕಳೆದ ಹಲವು ದಿನಗಳಿಂದ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಕೈ ಮೀರಿದರೆ ಲಾಕ್‍ಡೌನ್ ಅನಿವಾರ್ಯವಾಗುತ್ತದೆ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾದರೆ ಅದಕ್ಕೆ ಕಾಂಗ್ರೆಸ್ ಪಕ್ಷದವರೇ ಕಾರಣವಾಗುತ್ತಾರೆ. ಪಾದಯಾತ್ರೆ ಮಾಡಬೇಡಿ ಎಂದರೂ ಜನರನ್ನು ಗುಂಪುಗೂಡಿಸಿಕೊಂಡು ಪಾದಯಾತ್ರೆ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ನಾವು ಒಂದು ಹಂತದವರೆಗೆ ಸಹಿಸಿಕೊಳ್ಳಬಹುದು. ಇವರು ಜನರನ್ನು ಕೂಡಿಸಿಕೊಂಡು ಪಾದಯಾತ್ರೆ ಹೊರಟರೆ ಅದನ್ನು ಸರ್ಕಾರ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ.
ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಲಾಕ್‍ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ತಿಳಿಸಿದರು. ಕೆಲವರು ಸರ್ಕಾರ ಏನೂ ಮಾಡುವುದಿಲ್ಲ. ನಾವು ಹೇಗಾದರೂ ನಡೆದುಕೊಳ್ಳಬಹುದು ಎಂದು ಭಾವಿಸಿದ್ದಾರೆ. ನಮಗೆ ಜನರ ಪ್ರಾಣ ಮತ್ತು ಜೀವನ ಮುಖ್ಯ. ಪರಿಸ್ಥಿತಿ ಕೈ ಮೀರಿದರೆ ಏನು ಮಾಡಲು ಸಾಧ್ಯವಿಲ್ಲ ಎಂದರು.
ಕೊವಿಡ್ ಸೋಂಕಿನ ನಡುವೆಯೂ ಪಾದಯಾತ್ರೆ ಯನ್ನು ಕೈಗೊಳ್ಳುವುದರ ಮೂಲಕ, ಕಾಂಗ್ರೆಸ್ ನಾಯಕರು, ಜನರ ಬದುಕಿನ ಜತೆ ಚೆಲ್ಲಾಟ ಆಡುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಉದ್ದೇಶ ನೀರಿನ ಮೇಲೆ ರಾಜಕೀಯ ಮಾಡುವುದು, ಆದರೆ ನಮ್ಮ ಆತಂಕ ಇರುವುದು ಸಾರ್ವಜನಿಕರ ಆರೋಗ್ಯ ಕಾಪಾಡಿಕೊಳ್ಳುವುದಾಗಿದೆ ಎಂದರು.
ಕರೋನಾ ಸೋಂಕು ಉಲ್ಬಣಗೊಂಡು ಜನತೆ ಸಂಕಷ್ಟಕ್ಕೆ ಒಳಗಾದರೆ, ಕಾಂಗ್ರೆಸ್ ನಾಯಕರು ಹೊಣೆ ಹೊರಬೇಕಾದೀತು ಎಂದು ಎಚ್ಚರಿಸಿದ ಅವರು, ಕಾಂಗ್ರೆಸ್ ನಡೆಗೆ ನಾಡಿನ ಜನತೆಯೂ ಅಸಮಾಧಾನ ಗೊಂಡಿದ್ದಾರೆ. ಕಾಂಗ್ರೆಸ್ ನಾಯಕರ ನಡವಳಿಕೆ ಅತ್ಯಂತ ಹೊಣೆಗೇಡಿತನ ಎಂದು ವಾಗ್ದಾಳಿ ನಡೆಸಿದರು.
ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಯನ್ನು ಜಿಲ್ಲಾಡಳಿತ ನಿಭಾಯಿಸುತ್ತಿದೆ , ಎಂದ ಸಚಿವರು ಕಾಂಗ್ರೆಸ್. ನಾಯಕರ ವಿರುದ್ಧ ಎಫ್‍ಐಆರ್ ದಾಖಲಾಗಿದೆ, ಅವರು ನ್ಯಾಯಾಲಯದಲ್ಲಿ ಉತ್ತರಿಸಲಿ. ನೀರಿನ ಮೇಲೆ ರಾಜಕೀಯ ಮಾಡಲು ಹೊರಟಿದ್ದಾರೆ, ಆದರೆ ಜನತೆ ಬುದ್ದಿವಂತರು, ಇವರ ನಾಟಕವನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಮೇಕೆದಾಟು ಯೋಜನೆಯನ್ನು ಅನುಷ್ಟಾನ ಗಳಿಸಲು ನಮ್ಮ ಸರಕಾರ ಬದ್ದ ಯಾವುದೇ ಸಂಶಯ ಬೇಡ. ವಿವಾದ ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದ ಮುಂದಿದೆ. ಕಾಂಗ್ರೆಸ್ ನಾಯಕರು ಅಕಾರದಲ್ಲಿದ್ದಾಗ, ಐದು ವರ್ಷದಲ್ಲಿ ಕೇವಲ ಡಿಪಿಆರ್ ಸಲ್ಲಿಸಿದ್ದು ಬಿಟ್ಟರೆ, ಬೇರೆ ಏನೂ ಮಾಡಲಿಲ್ಲ ಎಂದು ಟೀಕಿಸಿದರು.
ಕೋರೋನಾ ನಿಬಂಧನೆಗಳನ್ನು ಪಾಲಿಸುವುದಿಲ್ಲ ಬೇಕಾದರೆ ಜೈಲಿಗೆ ಹಾಕಿ ಎಂದು ಸವಾಲು ಎಸೆದಿದ್ದಾರೆ ಇದು ಅವರ ಉದ್ದಟತನ ತೋರಿಸುತ್ತದೆ. ಕಾಂಗ್ರೆಸ್ ನಾಯಕರ ಬಗ್ಗೆ ಜನ ಸಾಮಾನ್ಯರು ಜಿಗುಪ್ಸೆ ಗೊಳ್ಳುತ್ತಿದ್ದಾರೆ ಎಂದರು. ನಮಗೆ ಸಿಕ್ಕ ವರದಿ ಪ್ರಕಾರ 30ಜನ ಲೀಡರ್ ಮೇಲೆ ಎಫ್‍ಐಆರ್ ದಾಖಲಾಗಿದೆ. ಇಂದು ಕೂಡ ಪಾದಯಾತ್ರೆ ನಡೆಯಲಿದೆ.
ರಾಮನಗರ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ. ಅದಕ್ಕೆ ಕಾರಣಕರ್ತರು ಯಾರು ಅವರ ವಿರುದ್ಧ ಮೊದಲು, ನಂತರ ಉಳಿದವರ ಮೇಲೆ ಕ್ರಮ. ದಂಡ ಹಾಕುವ ಪ್ರಕ್ರಿಯೆಯಲ್ಲಿ ಸರ್ಕಾರದ ವಿಳಂಬ ಇಲ್ಲ . ಕರೋನಾ ಸಂದರ್ಭದಲ್ಲಿ ಇವರು ಈ ರೀತಿ ಮಾಡಬಾರದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರ ಪುತ್ರನ ಬ್ಲಾಕ್ ಮೇಲ್ ಪ್ರಕರಣಕ್ಕೆ ಸಂಬಂಸಿದಂತೆ ಪ್ರತಿಕ್ರಿಯಿಸಿದ ಅವರು, ನಮ್ಮ ಮಂತ್ರಿ ಸೋಮಶೇಖರ್ ಮಗನ ಮೇಲೆ ಬ್ಲಾಕ್ ಮೇಲ್ ಮಾಡಿದ್ದಾರೆ. ಒಬ್ಬರನ್ನು ಬಂಸಿ ವಿಚಾರಣೆ ನಡೆಸಲಾಗುತ್ತಿದೆ.
ಈ ವಿಚಾರದಲ್ಲಿ ನಾವು ಯಾವ ಒತ್ತಡಕ್ಕೂ ಮಣಿಯುವುದಿಲ್ಲ. ಯಾರೇ ಪ್ರಭಾವಿಗಳಿದ್ದರೂ ಅವರನ್ನ ಬಿಡುವ ಪ್ರಶ್ನೆಯೇ ಇಲ್ಲ. ನಮ್ಮ ಪೊಲೀಸರು ಉಳಿದ ಆರೋಪಿಗಳನ್ನು ಬಂಸಲಾಗಿದ್ದಾರೆ ಎಂದು ತಿಳಿಸಿದರು.

Articles You Might Like

Share This Article