ಬೆಂಗಳೂರು.ಜು.12- ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆಲವು ಹೈ ಸೆಕ್ಯೂರಿಟಿ ಬ್ಯಾರಕ್‍ಗಳ ಬಳಿ ಪರಿಶೀಲನೆ ನಡೆಸಿ ಮೊಬೈಲ್ ಅಥವಾ ಇನ್ನಿತರ ನಿಷೇಧಿತ ವಸ್ತುಗಳನನ್ನು ಜೈಲಿನೊಳಗೆ ಹೇಗೆ ಸಾಧಿಗಿಸಲಾಗಿದೆ ಎಂಬುದರ ಬಗ್ಗೆ ಜೈಲು ಅಧಿಕಾರಿಗಳ ವಿಚಾರಣೆ ಮಾಡಿ ನಂತರ ಸ್ವತಃ ತಪಾಸಣೆ ನಡೆಸಿದ್ದಾರೆ.
ಇದೇ ವೇಳೆ ಕಾರಾಗೃಹದಲ್ಲಿ ಮಹಿಳಾ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಚಿವರು ಸಂವಾದ ನಡೆಸಿ ಬಗೆಹರಿಸುವ ಭರವಸೆ ನೀಡಿದರು. ಕಳೆದ ಒಂದು ವಾರದಲ್ಲಿ ಕಾರಾಗೃಹ ಅಧಿಕಾರಿಗಳು ವಿರುದ್ಧ ವಿವಿಧ ಆರೋಪಗಳು ಕೇಳಿಬಂದು ಮೊಕದ್ದಮೆ ದಾಖಲಿಸಲಾಗಿದೆ.
ನಾಲ್ಕು ಮಂದಿಯನ್ನು ಬಂಧಿಸಲಾಗಿದ್ದು ಅವರಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಹ ಇದ್ದಾರೆ. ಒಂದು ಮೊಬೈಲï, ಹಾಗೂ ಗಾಂಜಾ ಹಾಗೂ ಮಾದಕ ದ್ರವ್ಯಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
ಆಸ್ಪತ್ರೆ ವಿಭಾಗಕ್ಕೂ ಭೇಟಿ ನೀಡಿ ವೈದ್ಯಕೀಯ ಸೌಲಭ್ಯಗಳೂ ಹಾಗೂ ಸಮಸ್ಯೆಗಳ ಬಗ್ಗೆಯೂಸಿಬ್ಬಂದಿಗಳ ಜೊತೆ ಮಾತನಾಡಿ ಮಾಹಿತಿ ಪಡೆದರು.ಅಧಿಕಾರಿಗಳು ಅಕ್ರಮ ತಡೆಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು, ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಎಂದು ಸೊಚಿಸಿದರು