ಬೆಂಗಳೂರು,ಸೆ.16-ಮತಾಂತರ ನಿಷೇಧ ಕಾಯ್ದೆಯಿಂದ ಯಾವುದೇ ಧರ್ಮದವರಿಗೆ ತೊಂದರೆಯಾಗುವುದಿಲ್ಲ. ಸೇವೆ ಹೆಸರಿನಲ್ಲಿ ಮತಾಂತರ ಮಾಡುವ ಪ್ರಕ್ರಿಯೆಗೆ ಕಡಿವಾಣ ಬೀಳಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್‍ನಲ್ಲಿ ಮತಾಂತರ ನಿಷೇಧ ಕಾಯ್ದೆ ನಿನ್ನೆ ಒಪ್ಪಿಗೆ ಪಡೆದಿದೆ. ಬೆಳಗಾವಿ ಅವೇಶನದಲ್ಲಿ, ವಿಧಾನಸಭೆಯಲ್ಲಿ ಈ ವಿಧೇಯಕಕ್ಕೆ ಒಪ್ಪಿಗೆ ದೊರೆತಿತ್ತು. ಸುಘ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೊಳಿಸಲಾಗಿತ್ತು. ಉಭಯ ಸದನಗಳ ಒಪ್ಪಿಗೆ ಕಾಯ್ದೆಗೆ ದೊರೆತಿದೆ ಎಂದರು.
ಇದನ್ನೂ ಓದಿ: ಅಪ್ಪು ಜನ್ಮದಿನವನ್ನು ‘ಸ್ಪೂರ್ತಿ ದಿನ’ವಾಗಿ ಆಚರಿಸಲು ಸರ್ಕಾರ ಘೋಷಣೆ
ಅಲ್ಪಸಂಖ್ಯಾತರ ಓಲೈಕೆಯನ್ನು ಕಾಂಗ್ರೆಸ್ ಹಿಂದಿನಿಂದಲೂ ಮಾಡುತ್ತಾ ಬಂದಿದ್ದು, ಕಾಂಗ್ರೆಸ್‍ನ ಮುಖವಾಡ ಕಳಚಿದಂತಾಗಿದೆ. ನಮ್ಮ ಸರ್ಕಾರ ಬಂದ ಮೇಲೆ ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿರುವುದು ಸಂತೋಷದ ವಿಷಯವಾಗಿದೆ.
ಮತಾಂತರದ ಮೂಲಕ ಧರ್ಮವನ್ನು ಒಡೆಯಲಾಗುತ್ತಿತ್ತು. ಹಿಂದೂ ಧರ್ಮಕ್ಕೂ ಧಕ್ಕೆಯಾಗುತ್ತಿದ್ದು, ಮತಾಂತರ ನಿಷೇಧ ಕಾಯ್ದೆಯಿಂದ ಬಲವಂತದ ಮತಾಂತರಕ್ಕೆ ಅವಕಾಶ ಇರುವುದಿಲ್ಲ ಎಂದರು.