ಸತೀಶ್ ಜಾರಕಿಹೊಳಿ ಹೇಳಿಕೆಗೆ ಗೃಹ ಸಚಿವರು ಕಿಡಿ

Social Share

ಬೆಂಗಳೂರು,ನ.8- ಕಾಂಗ್ರೆಸ್ ನಾಯಕರಿಗೆ ಹಿಂದೂ ಪದವೆಂದರೆ ಅಶ್ಲೀಲ ಹಾಗೂ ಅದೇ ರೀತಿಯಲ್ಲಿ ಕೇಸರಿ ಎಂದರೆ ಅಲರ್ಜಿ. ಈ ನಿಲುವು ಆ ಪಕ್ಷದ ಸಿದ್ದಾಂತದ ಒಂದು ಅವಿಭಾಜ್ಯ ಅಂಗವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದರು.

ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನ.11ರಂದು ನಡೆಯಲಿರುವ ಸಾರ್ವಜನಿಕ ಸಮಾವೇಶದ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ನಾಯಕ ಸತೀಶ್ ಜಾರಕಹೊಳಿ ಅವರು ಹಿಂದೂ ಪದದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವರ ಹೇಳಿಕೆ ನನಗೆ ಆಶ್ಚರ್ಯ ತಂದಿಲ್ಲ, ಅವರು ತಮ್ಮ ಪಕ್ಷದ ನಿಜ ಧೋರಣೆಯನ್ನು ದ್ವನಿಸಿದ್ದಾರೆ ಎಂದು ಆರೋಪಿಸಿದರು.

ಮೊಬೈಲ್‍ನಲ್ಲೇ ಕಾಲ ಕಳೆಯುತ್ತಿದ್ದ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನಡೆಯಿಂದಾಗಿ ದೇಶದಲ್ಲಿ ಅಪ್ರಸ್ತುತವಾಗುತ್ತಿದೆ. ಕೆಲವು ಸಂಘಟನೆಗಳು ಟಿಪ್ಪು ಜಯಂತಿ ಆಚರಣೆ ನಡೆಸುವ ಪ್ರಯತ್ನದ ಬಗ್ಗೆ ಪ್ರತಿಕ್ರಿಯಿಸಿ, ಸ್ಥಳೀಯ ಸಂಸ್ಥೆಗಳು ನಿರ್ಧಾರ ತೆಗೆದುಕೊಳ್ಳುತ್ತವೆ ಎಂದರು.

ನಾಡ ಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ, ವಂದೇ ಭಾರತ್ ರೈಲಿಗೆ ಚಾಲನೆ ಹಾಗೂ ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ನ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ.ಅಂದು ಬೃಹತ್ ಜನಸ್ತೋಮ ಉದ್ದೇಶಿಸಿ ಮೋದಿ ಮಾತಾಡಲಿದ್ದಾರೆ ಎಂದು ತಿಳಿಸಿದರು.

ಭದ್ರತೆಗೆ 4 ಸಾವಿರ ಸಿಬ್ಬಂದಿ:
ಪ್ರಧಾನಿಯವರ ಭೇಟಿಯ ಹಿನ್ನಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಹಾಗೂ ಭದ್ರತಾ ಕ್ರಮಗಳ ನಿರ್ವಹಣೆಗೆ ಸುಮಾರು ನಾಲ್ಕು ಸಾವಿರ ರಕ್ಷಣಾ ಸಿಬ್ಬಂದಿಯನ್ನು ನಿಯುಕ್ತಿ ಗೋಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ವಿಮಾನ ನಿಲ್ದಾಣದ ಬಳಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿಯವರು ಮಾತನಾಡಲಿದ್ದಾರೆ. ಆ ಸಮಾವೇಶದ ಪೂರ್ವ ಸಿದ್ದತೆಯನ್ನು ಇಂದು ಪೊಲೀಸ್ ಅಧಿಕಾರಿಗಳೊಂದಿಗೆ ಪರಿಶೀಲಿಸಲಾಯಿತು.

ಸತೀಶ್ ಜಾರಕಿಹೊಳಿ ಹೇಳಿಕೆಗೆ ಕೈನಲ್ಲಿ ಆಕ್ರೋಶ

ಸಮಾವೇಶದ ವೇದಿಕೆ, ಗಣ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರಿಗೆ ಒದಗಿಸಲಾದ ಆಸನದ ವ್ಯವಸ್ಥೆ, ಭದ್ರತೆ ಹಾಗೂ ರಕ್ಷಣಾ ವ್ಯವಸ್ಥೆಯ ಸಿದ್ದತೆಗಳನ್ನು ಪರಿಶೀಲಿಸಲಾಯಿತು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Articles You Might Like

Share This Article