ಬೆಂಗಳೂರು,ಜ.20- ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಕಾರಾಗೃಹ ಸಿಬ್ಬಂದಿ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಮನಗರ, ತುಮಕೂರು, ಕಲಬುರಗಿ ಹಾಗೂ ಬೆಳಗಾವಿ ಕಾರಾಗೃಹಗಳಲ್ಲಿ ಕೆಲವು ಅಕ್ರಮ ಚಟುವಟಿಕೆಗಳ ಬಗ್ಗೆ ವರದಿಯಾಗಿದ್ದು, ಇದರ ಬಗ್ಗೆ ವಿಸ್ತೃತ ತನಿಖೆಗೆ ಆದೇಶ ನೀಡಿದ್ದು, ತುಮಕೂರು ಜಿಲ್ಲಾ ಕಾರಾಗೃಹದ ವಾರ್ಡನ್ ಪ್ರವೀಣ್ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹೇಳಿದರು. ಹಾಸನ ಜಿಲ್ಲಾ ಕಾರಾಗೃಹದ ಮೇಲೆ ನಿನ್ನೆ ಜಿಲ್ಲೆ ಪೊಲೀಸ್ ಸಿಬ್ಬಂದಿ ದಿಢೀರ್
ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟು ಕೊಳ್ಳಲಾಗಿದ್ದ ಮೊಬೈಲ್ ಸೆಟ್ಗಳನ್ನು ಸೀಜ್ ಮಾಡಿದ್ದಾರೆ.
ಕಾಂಗ್ರೆಸ್ನಲ್ಲಿ 2 ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಇಲ್ಲ: ಡಿಕೆಶಿ
ಮೊಬೈಲ್ಗಳನ್ನು ಜೈಲಿನೊಳಗೆ ಸಾಗಿಸಲು ಸಹಕರಿಸಿದ ಸಿಬ್ಬಂದಿ ಹಾಗೂ ಅದನ್ನು ಜೈಲಿನೊಳಗೆ ಉಪಯೋಗಿಸಿದ ಜೈಲು ಬಂಗಳ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ಬೆಳಗಾವಿ ಕೇಂದ್ರ ಕಾರಾಗೃಹದಿಂದ ಇತ್ತೀಚೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ ಕೈದಿಯ ವಿರುದ್ಧವೂ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ಹೇಳಿದರು.
ಮೆಟ್ರೋ ಎಂಡಿ ಅಂಜುಮ್ ಪರ್ವೇಜ್ಗೆ ಪೊಲೀಸ್ ನೋಟಿಸ್
ರಾಜ್ಯದ ಕಾರಾಗೃಹಗಳಲ್ಲಿ ಅಕ್ರಮವಾಗಿ ಮೊಬೈಲ್ ಉಪಯೋಗಿಸುವುದನ್ನು ಪ್ರತಿಬಂಸಲು ಅತ್ಯಾಧುನಿಕ ಮೊಬೈಲ್ ಜಾಮರ್ಗಳನ್ನು ಅಳವಡಿಸಲಾಗುತ್ತಿದೆ ಎಂದೂ ಸಚಿವರು ತಿಳಿಸಿದರು.
Home Minister, Araga Jnanendra, jails, Illegal, measures,