ನಿವಾಸಕ್ಕೆ ನುಗ್ಗಿ ಎಬಿವಿಪಿ ಕಾರ್ಯಕರ್ತರ ಆಕ್ರೋಶ, ಗೃಹ ಸಚಿವರು ಹೇಳಿದ್ದೇನು..?

Social Share

ಶಿವಮೊಗ್ಗ,ಜು.30- ಎಸ್‍ಡಿಪಿಐ ನಂತಹ ಸಂಸ್ಥೆಗಳ ಮೇಲೆ ನಿಷೇಧ ಹೇರಬೇಕೆಂಬ ಬೇಡಿಕೆಯೊಂದಿಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಾನು ಅವರ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ. ಸರ್ಕಾರವೂ ಆ ನಿಟ್ಟಿನಲ್ಲಿ ಯೋಚಿಸುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ ಬೆಂಗಳೂರಿನ ತಮ್ಮ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಎಬಿವಿಪಿ ಕಾರ್ಯಕರ್ತರು ಎಂದು ಹೇಳಿಕೊಂಡ ಕೆಲವರು ಪ್ರತಿಭಟನೆ ಮಾಡಿದ್ದಾರೆ. ಆ ಬಗ್ಗೆ ಗಮನ ಹರಿಸುವಂತೆ ನಾನು ಪೊಲೀಸರರಿಗೆ ಹೇಳಿದ್ದೇನೆ ಎಂದರು.

ಅವರು ಎಬಿವಿಪಿ ಕಾರ್ಯಕರ್ತರೇ ಆಗಿದ್ದರೆ ನಾನು ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ. ಸರ್ಕಾರ ನಿಮ್ಮ ಭಾವನೆ ಅರ್ಥ ಮಾಡಿಕೊಳ್ಳುತ್ತದೆ ಹಾಗೂ ಸದಸ್ಯರನ್ನು ನಾನೇ ಆಹ್ವಾನಿಸಿ ಮಾತನಾಡುತ್ತೇನೆ ಎಂದು ಹೇಳಿದರು.

ಡಿಜಿ ಹಳ್ಳಿ, ಕೆಜಿ ಹಳ್ಳಿ ಗಲಭೆಗಳಿಂದ ಹಿಡಿದು ಇತ್ತೀಚಿಗಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯಂತಹ ಘಟನೆಗಳ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮನೆಯಲ್ಲಿ ನನ್ನನ್ನು ಭೇಟಿಯಾಗಲು ಬಂದಿದ್ದ ಎಬಿವಿಪಿ ಕಾರ್ಯಕರ್ತರು, ನನ್ನ ಅನುಪಸ್ಥಿತಿಯಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿ ಯೋಗಿ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಆದರೆ ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆ. ನಮಗೆ ನಮ್ಮದೇ ಆದ ಕಾರಣ ಇದೆ ಎಂದು ಹೇಳಿದ್ದಾರೆ.

Articles You Might Like

Share This Article