ಬೆಂಗಳೂರು, ಜ.16- ಸ್ವಚ್ಚ ರಾಜಕಾರಣ ದಲ್ಲಿ ನಾನು ಬದ್ಧತೆ ಹೊಂದಿದ್ದು, ಸಮಾಜದ್ರೋಹಿಗಳೂ ಮತ್ತು ಪೀಡಕ
ರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ ಬದುಕಲು ಇಚ್ಛಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬೆಂಗಳೂರಿನ ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಯಾಂಟ್ರೊ ರವಿಯಂಥ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂಥ ಪ್ರಸಂಗ ಬಂದರೆ ಸಾವನ್ನು ಬಯಸುತ್ತೇನೆ ಎಂದು ಹೇಳಿದ್ದಾರೆ.
ನನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕಿ ಮಾತನಾಡುತ್ತಿರುವ ಕೆಲವು ನಾಯಕರ ಬಗ್ಗೆ ಪ್ರಸ್ತಾಪಿಸಿದ ಅವರು, ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು. ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು ಪಾರದರ್ಶಕವಾಗಿವೆ ಎಂದಿದ್ದಾರೆ.
ಬೆಂಗಳೂರು-ಮೈಸೂರು ನಡುವೆ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ
ಒಂದು ವೇಳೆ ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂತಹ ಪರಿಸ್ಥಿತಿ ಬಂದರೆ ಆತ್ಮಹತ್ಯೆ ದಾರಿ ತುಳಿಯುತ್ತೇನೆ ಎಂದು ಅವರು ಭಾವುಕರಾಗಿ ನುಡಿದರು.
ಗುಜರಾತ್ ಪ್ರವಾಸದ ಸಂದರ್ಭದಲ್ಲಿ ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಇದರ ಮುಂದುವರಿದ ಭಾಗವಾಗಿ ಶೀಘ್ರದಲ್ಲಿಯೇ ವಿಶ್ವ ವಿದ್ಯಾಲಯದ ಶಂಕು ಸ್ಥಾಪನೆ ಕಾರ್ಯಕ್ರಮವೂ ನಡೆಯಲಿದೆ ಎಂದು ತಿಳಿಸಿದರು.
ಚೀನಾದಲ್ಲಿ ಸ್ಫೋಟ : 2 ಸಾವು, 12 ಕಾರ್ಮಿಕರು ನಾಪತ್ತೆ
ಗುಜರಾತ್ ಮುಖ್ಯಮಂತ್ರಿ ಭೂಪೆಂಧ್ರ ಭಾಯಿ ಪಟೇಲ್ ಅವರನ್ನು ಸೌಜನ್ಯ ಭೇಟಿ ನಡೆಸಿದ್ದೇನೆ. ಎಲ್ಲವೂ ತೆರದ ಪುಸ್ತಕದಂತೆ ಇದೆ. ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ವ್ಯಕ್ತಿಯೊಬ್ಬರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಅವರು ಹೇಳಿದ್ದಾರೆ.
Home Minister, araga jnanendra, santro ravi,