ದೇಶ ದುರ್ಬಲಗೊಳಿಸುವ ಶಕ್ತಿಯನ್ನು ಮಟ್ಟಹಾಕುತ್ತೇವೆ : ಜ್ಞಾನೇಂದ್ರ

Social Share

ಬೆಂಗಳೂರು,ಫೆ.11- ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಖಚಿತ ಮಾಹಿತಿ ಮೇರೆಗೆ ರಾಜ್ಯ ಪೊಲೀಸರು ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ವಿಡಿಯೋದಲ್ಲಿ ಮಾತನಾಡಿರುವ ಅವರು, ರಾಜ್ಯದ ಆಂತರಿಕ ಭದ್ರತಾ ವಿಭಾಗ ಹಾಗೂ ರಾಷ್ಟ್ರೀಯ ತನಿಖಾ ದಳ ಸಹಭಾಗಿತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ವಶದಲ್ಲಿರುವ ಶಂಕಿತ ಆರೀಫ್ ವಿದೇಶ ಪ್ರಯಾಣಕ್ಕೆ ತಯಾರಿ ನಡೆಸಿದ್ದ ಎಂಬ ಮಾಹಿತಿ ಮೇರೆಗೆ ಮಿಂಚಿನ ಕಾರ್ಯಾಚರಣೆ ನಡೆಸಿರುವ ಎನ್‍ಐಎ ಮತ್ತು ಐಎಸ್‍ಡಿ ದಳದವರು ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಜನವರಿಯಲ್ಲಿ 6,085 ಕೋಟಿ ದಾಖಲೆಯ ಜಿಎಸ್‍ಟಿ ಸಂಗ್ರಹ

ದೇಶದಲ್ಲಿ ಕೋಮು ಭಾವನೆ ಕೆರಳಿಸಿ ಅಸ್ಥಿರತೆ ಉಂಟು ಮಾಡುತ್ತಿರುವ ಸಂಘಟನೆಗಳೂ ಹಾಗೂ ಅವುಗಳ ಸಂಪರ್ಕ ಹೊಂದಿರುವ ವ್ಯಕ್ತಿಗಳ ಬಗ್ಗೆ, ಸದಾ ಕಣ್ಗಾವಲು ಇರಿಸಿದ್ದು, ಭಾರತವನ್ನು ದುರ್ಬಲಗೊಳಿಸುವ ಎಲ್ಲಾ ಪ್ರಯತ್ನಗಳನ್ನು ಹತ್ತಿಕ್ಕಲಾಗುವುದು ಎಂದು ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

Home Minister, Araga Jnanendra, terrorist, arrested,

Articles You Might Like

Share This Article