ಬೆಂಗಳೂರು,ಫೆ.28- ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಎಫ್‍ಎಸ್‍ಎಲ್‍ನವರು ವೈಜ್ಞಾನಿಕ ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಪೋಸ್ಟಿಂಗ್ ಮಾಡಿದ್ದಾರೆ. ನಾಸೀರ್ ಸಾಬ್ ಜಿಂದಾಬಾದ್ ಎಂದು ಹೇಳಲಾಗಿದೆ ಅಂತ ಕೆಲವರು ಹೇಳುತ್ತಿದ್ದಾರೆ. ಇನ್ನು ಕೆಲವರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ರು ಅಂತ ಹೇಳಲಾಗುತ್ತಿದೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದರು.
ಈಗಾಗಲೇ ಎಫ್‍ಎಸ್‍ಎಲ್‍ನವರು ಪರೀಶೀಲನೆ ಕೈಗೊಂಡಿದ್ದಾರೆ. ಎಲ್ಲ ವೀಡಿಯೋ ತುಣುಕುಗಳನ್ನು ಸಂಗ್ರಹಿಸುತ್ತಿದ್ದಾರೆ. ಅಧಿಕೃತವಾಗಿ ಸುದ್ದಿ ವಾಹಿನಿಯಲ್ಲಿ ಮೊದಲು ಪ್ರಸಾರವಾದ ವೀಡಿಯೋಗಳನ್ನು ಎಫ್‍ಎಸ್‍ಎಲ್‍ನವರು ಪಡೆಯಲಿದ್ದಾರೆ. ವೈಜ್ಞಾನಿಕವಾಗಿ ಖಚಿತವಾದರೆ ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಬಿಜೆಪಿಯವರು ಕೊಟ್ಟಿರುವ ದೂರನ್ನು ಸುಮೋಟೋ ಜತೆ ಸೇರಿಸಲಾಗುವುದು ಎಂದು ಹೇಳಿದರು.
ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿದ ಪಾಕ್ ಪರ ಘೋಷಣೆ
ಘಟನೆಗೆ ಸಂಬಂಧಿಸಿದಂತೆ ಕೂಲಂಕುಷವಾಗಿ ಎಲ್ಲವನ್ನು ಪರಿಶೀಲನೆ ನಡೆಸಲಾಗುತ್ತಿವೆ. ಘೋಷಣೆ ಕೂಗಿದರೂ ಎನ್ನಲಾದ ಸ್ಥಳದಲ್ಲಿ ಯಾರಿದ್ದರು ಅನ್ನುವುದನ್ನು ಗುರುತಿಸಿ, ಅವರನ್ನು ವಿಚಾರಣೆ ನಡೆಸಲಾಗುತ್ತೆದೆ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ಖಚಿತವಾದರೆ ತಪ್ಪಿತಸ್ಥನ ವಿರುದ್ಧ ಏನೆಲ್ಲ ಕಾನೂನು ರೀತ್ಯ ಕ್ರಮ ಜರುಗಿಸಬೇಕೊ ಅದು ಆಗುತ್ತದೆ. ಯಾವುದೇ ಕಾರಣಕ್ಕೂ ರಾಜೀ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಯಾರೋ ಒಬ್ಬ ಮಾಡಿದ್ದನೆಂಬುದನ್ನು ಕಾಂಗ್ರೆಸ್ ಪಕ್ಷಕ್ಕೆ ತಳುಕು ಹಾಕುವುದು ಸರಿಯಲ್ಲ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮಾಡಿ, ವರದಿ ಆಧರಿಸಿ ಏನೆಲ್ಲ ಕಾನೂನು ಕ್ರಮ ತೆಗೆದುಕೊಳ್ಳಬೇಕೋ ಅದು ಆಗುತ್ತದೆ. ಬಿಜೆಪಿ ಪಕ್ಷ ಶೂರವಾದಗಿನಿಂದಲೂ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಎಂದು ಹೇಳುತ್ತಲೇ ಇದ್ದಾರೆ. ಕಾಂಗ್ರೆಸ್ ಪಕ್ಷ ಏನು ತಪ್ಪು ಮಾಡಿದೆ ಎಂದು ಪ್ರಶ್ನಿಸಿದರು.
ಆತ್ಮಸಾಕ್ಷಿ ಪರ ಎಸ್.ಟಿ.ಸೋಮಶೇಖರ್ ಮತ :
ಬಿಜೆಪಿಯರ ಪ್ರತಿಭಟನೆ ತಪ್ಪು ಅಂತ ಹೇಳುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡಲಿ. ಸದನದ ಒಳಗೆ ಪ್ರತಿಭಟಿಸುವುದಾದರೆ ಸ್ಪೀಕರ್ ಅನುಮತಿ ಬೇಕಾಗುತ್ತದೆ ಎಂದರು. ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರು ಆತ್ಮಸಾಕ್ಷಿ ಪರ ಮತ ಹಾಕುವುದಾಗಿ ಹೇಳಿದ್ದರು. ಅದರಂತೆ ಮಾತಿನ ಪ್ರಕಾರ ಮತ ಚಲಾಯಿಸಿರಬಹುದು. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ತಿಳಿಸಿದರು.