ಹಾಸನ, ಮಾ.2- ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಬೈಕ್‍ಗೆ ಡಿಕ್ಕಿ ಹೊಡೆದ ಪಡೆದ ಸವಾರ ಮೃತಪಟ್ಟಿದ್ದಾರೆ. ರಾತ್ರಿ ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಬೆಂಗಾವಲು ವಾಹನ ಗಂಡಸಿ ಬಳಿ ಎದುರಿನಿಂದ ಬರುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದೆ.
ಗಂಭೀರವಾರ ಗಾಯಗೊಂಡಿದ್ದ ಬೈಕ್ ಸವಾರ ರಮೇಶ್(45) ಅವರನ್ನು ಕೂಡಲೇ ಗಂಡಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದು, ವೈದ್ಯರು ಪರೀಕ್ಷಿಸಿ ಈ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಬಿಗ್ ಬಿ ಹಾಗೂ ಧರ್ಮೇಂದ್ರ ಬಂಗಲೆಗಳಿಗೆ ಹುಸಿ ಬಾಂಬ್ ಕರೆ
ಅಪಘಾತ ನಡೆದ ಸಂದರ್ಭದಲ್ಲಿ ಗೃಹ ಸಚಿವರು ಪ್ರಯಾಣಿಸುತ್ತಿದ್ದ ಕಾರು ಘಟನಾ ಸ್ಥಳದಿಂದ 300 ಮೀಟರ್ ದೂರದಲ್ಲಿತ್ತು. ಅಪಘಾತದ ಬಗ್ಗೆ ಸಚಿವರಿಗೆ ನಾವು ಮಾಹಿತಿ ನೀಡದೇ ಇರುವುದರಿಂದ, ತೀರ್ಥಹಳ್ಳಿ ತಲುಪುವವರೆಗೆ ಘಟನೆ ಬಗ್ಗೆ ಅವರಿಗೆ ತಿಳಿದಿರಲಿಲ್ಲ ಎಂದು ಎಸ್ಪಿ ಹರಿರಾಂ ಶಂಕರ್ ಸ್ಪಷ್ಟಪಡಿಸಿದ್ದಾರೆ.
ರೂಪಾಯಿ ಮೌಲ್ಯ ಚೇತರಿಕೆ, 22 ಪೈಸೆ ಏರಿಕೆ
ಮೃತ ವ್ಯಕ್ತಿಯ ಪತ್ನಿ ನೀಡಿದ ದೂರಿನಂತೆ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಕಾನೂನು ಪ್ರಕ್ರಿಯೆಗಳ ನಂತರ ಮೃತದೇಹವನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದ್ದಾರೆ.