ಮಂಗಳೂರು ಅ.29- ಕೇರಳದ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರು ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಈಗಾಗಲೇ ಕ್ರಮವಹಿಸಲಾಗಿದೆ.
ಮಡಿಕೇರಿ, ಮೈಸೂರು, ಮಂಗಳೂರು ದಸರಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿತ್ತು. ಮುಂದುವರೆದ ಭಾಗವಾಗಿ ಈಗ ಬಾಂಬ್ ಸೋಟದ ಬಳಿಕ ಮತಷ್ಟು ನಿಗಾ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದಿದ್ದಾರೆ.
ಬಿಜೆಪಿ-ಜೆಡಿಎಸ್ ಲೋಕಸಭಾ ಕ್ಷೇತ್ರಗಳ ಹಂಚಿಕೆ ಮತ್ತಷ್ಟು ವಿಳಂಬ
ರಾಜ್ಯದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವುದು ಕಳವಳಕಾರಿ. ಅದನ್ನು ನಿಗ್ರಹಿಸಲು ಸಾಕಷ್ಟು ಆಧುನಿಕ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಬಿಟ್ ಕಾಯಿನ್ ಹಗರಣದ ಬಳಿಕ ರಾಜ್ಯದ ಪೊಲೀಸರು ಕೂಡ ರಾಷ್ಟ್ರೀಯ ಅಂತರಾಷ್ಟ್ರೀಯ ಗುಣಮಟ್ಟದ ಸಾಫ್ಟ್‍ವೇರ್ ಬಳಸುತ್ತಿದ್ದಾರೆಂದು ತಿಳಿಸಿದರು.