Sunday, May 5, 2024
Homeರಾಜ್ಯಯಾರೇ ಕಾನೂನು ಉಲ್ಲಂಘಿಸಿದರೂ ಕಠಿಣ ಕ್ರಮ: ಪರಮೇಶ್ವರ್

ಯಾರೇ ಕಾನೂನು ಉಲ್ಲಂಘಿಸಿದರೂ ಕಠಿಣ ಕ್ರಮ: ಪರಮೇಶ್ವರ್

ಬೆಂಗಳೂರು, ನ.17- ಕಾನೂನನ್ನು ಯಾರೇ ಉಲ್ಲಂಘನೆ ಮಾಡಿದರೂ ಕಠಿಣ ಕ್ರಮ ಜರುಗಿಸಲಾಗುವುದು. ಇದರಲ್ಲಿ ವ್ಯಕ್ತಿಗತ ದ್ವೇಷ ಅಥವಾ ರಾಜಕೀಯ ಕಾರಣಗಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಬಜರಂಗದಳದ ಕಾರ್ಯಕರ್ತರ ಗಡಿಪಾರಿಗೆ ನೋಟಿಸ್ ನೀಡಿರುವುದಕ್ಕೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಇರುವುದೇ ಕಾನೂನು ಪರಿಪಾಲನೆ ಮಾಡಲಿಕ್ಕೆ.
ಕಾನೂನು ಮೀರಿದರೆ ಕಠಿಣ ಕ್ರಮ ಜರುಗಿಸುವುದು ಅನಿವಾರ್ಯ ಎಂದು ಹೇಳಿದರು.

ಕಾನೂನನ್ನು ಹೊರತು ಪಡಿಸಿ ಪೊಲೀಸ್ ಇಲಾಖೆ ಕೆಲಸ ಮಾಡಲಾಗುವುದಿಲ್ಲ. ಬಜರಂಗದಳವಾಗಲಿ, ಸಂಘ ಸಂಸ್ಥೆಯಾಗಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದರೆ ನಮ್ಮ ಸಹಕಾರ ಇರುತ್ತದೆ. ಕಾನೂನು ಮೀರಿದರೆ ಏನು ಮಾಡಬೇಕು. ಪೊಲೀಸ್ ಇಲಾಖೆ ಇರುವುದೇ ಕಾನೂನು ಪಾಲನೆಗೆ ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ಈ ಹಂತದಲ್ಲಿ ಯಾವುದೇ ವ್ಯಕ್ತಿಗತ ದ್ವೇಷ, ಮತ್ತೊಬ್ಬರನ್ನು ಹತ್ತಿಕ್ಕವ ಉದ್ದೇಶ ಅಥವಾ ರಾಜಕೀಯ ಕಾರಣಗಳು ಇರುವುದಿಲ್ಲ ಎಂದರು.

ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ, ಬ್ಲಾಕ್‍ಮೇಲ್‍ಗೆಲ್ಲ ಹೆದರುವುದಿಲ್ಲ: ಡಿಸಿಎಂ

ಬಜರಂಗದಳದವರು ಕಾನೂನು ವ್ಯಾಪ್ತಿಯಲ್ಲಿದ್ದರೆ ನಾವು ಅವರ ಜೊತೆಯಲ್ಲಿ ಇರುತ್ತೇವೆ. ಅವರು ಕಾನೂನು ಮೀರಿದರೆ ಕ್ರಮ ಕೈಗೊಳ್ಳುವುದು ಅನಿವಾರ್ಯ. ರಾಜ್ಯದಲ್ಲಿ ಶಾಂತಿ ಕಾಪಾಡುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನಸಾಮಾನ್ಯರಿಗೆ ಭರವಸೆ ನೀಡಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್‍ಗೆ ಬರುವುದಾದರೆ ನನ್ನ ಅಭ್ಯಂತರ ಇಲ್ಲ. ಅವರು ಪಕ್ಷಕ್ಕೆ ಬರುವುದಾದರೆ ಸ್ವಾಗತ ಮಾಡುತ್ತೇನೆ. ಈಗೀನ್ನೂ ಅವರು ಇನ್ನೂ ಬಿಜೆಪಿಯ ಮುಖಂಡರಾಗಿದ್ದಾರೆ. ಈ ಹಂತದಲ್ಲಿ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದರು.

ಸೋಮಣ್ಣ ವಿಷಯದಲ್ಲಿ ಏನಾಗುತ್ತಿದೆ ಎಂದು ಗೋತ್ತಿಲ್ಲ. ತುಮಕೂರು ಲೋಕಸಭೆ ಕ್ಷೇತ್ರಕ್ಕೆ ಅವರು ಅಭ್ಯರ್ಥಿ ಎಂಬ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಅಧ್ಯಕ್ಷರ ಜೊತೆ ಚರ್ಚೆ ಮಾಡಿರಬಹುದು, ಆದರೆ ತಮಗೆ ಮಾಹಿತಿ ಇಲ್ಲ ಎಂದರು.

ರಾಜಕೀಯದಲ್ಲಿ ಎಲ್ಲರಿಗೂ ತಮ್ಮದೆ ಆದ ಶಕ್ತಿ ಇದೆ, ಹಿಂಬಾಲಕರಾಗಿರುತ್ತಾರೆ. ನಾಯಕರು ಬರುವುದರಿಂದ ಅದು ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು. ತೆಲಂಗಾಣ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್‍ಖಾನ್ ನೀಡಿರುವ ಹೇಳಿಕೆಯ ಬಗ್ಗೆ ತಮಗೆ ಮಾಹಿತಿ ಇಲ್ಲ. ಅವರ ಹೇಳಿಕೆಯನ್ನು ಗಮನಿಸಿಲ್ಲ, ಗೋತ್ತಿಲ್ಲದೆ ಪ್ರತಿಕ್ರಿಯಿಸಲ್ಲ. ವಿಷಯ ಗೋತ್ತಿಲ್ಲದೆ ಹೇಳಿಕೆ ನೀಡುವುದಿಲ್ಲ ಎಂದರು.

RELATED ARTICLES

Latest News