Monday, May 6, 2024
Homeರಾಷ್ಟ್ರೀಯನಾವು ಹಿಂದೂ ವಿರೋಧಿಗಳಲ್ಲ : ಗೃಹಸಚಿವ ಪರಮೇಶ್ವರ್

ನಾವು ಹಿಂದೂ ವಿರೋಧಿಗಳಲ್ಲ : ಗೃಹಸಚಿವ ಪರಮೇಶ್ವರ್

ಬೆಂಗಳೂರು,ಜ.5- ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವಲ್ಲಿ ಹೆಚ್ಚಿನಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿಗಳಾಗಲು ಸಾಧ್ಯ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೀಕೆಗೂ ಇತಿಮಿತಿಗಳಿರಬೇಕು. ನಮ್ಮ ಸರ್ಕಾರ ನ್ಯಾಯ ರೀತಿ ನಡೆದುಕೊಳ್ಳುತ್ತಿದೆ ಎಂದು ಹೇಳಿದರು.

ಬಿಜೆಪಿಯವರ ನಾನು ಕರಸೇವಕ ಎಂಬ ಅಭಿಯಾನಕ್ಕೆ ಪ್ರತಿಕ್ರಿಯಿಸಿದ ಅವರು, ಕಾನೂನು ಸುವ್ಯವಸ್ಥೆ ವಿಷಯದಲ್ಲಿ ರಾಜಕೀಯ ಮಾಡುವುದು ಅನಗತ್ಯ. ನ್ಯಾಯಾಲಯಗಳಿಂದ ಸಮನ್ಸ್ ಹೋಗಿದೆ. ಅದರ ಆಧಾರದ ಮೇಲೆ ಪೊಲೀಸರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ. ಎಲ್ಲವೂ ಕಾನೂನಿನ ಪ್ರಕಾರವೇ ನಡೆಯುತ್ತಿದೆ.

ಇದರಲ್ಲಿ ಯಾವುದೇ ಲೋಪಗಳಾಗಿಲ್ಲ. ರಾಜಕೀಯ ಕಾರಣಕ್ಕಾಗಿ ಬಳಕೆ ಮಾಡುವುದು ಒಳ್ಳೆಯದಲ್ಲ ಎಂದರು. ಬಾಬಾ ಬುಡನ್‍ಗಿರಿ ಪ್ರಕರಣದಲ್ಲಿ ನಾವು ಯಾವುದೇ ಮುತುವರ್ಜಿ ವಹಿಸಿಲ್ಲ. ನ್ಯಾಯಾಲಯ ಸೂಚನೆ ನೀಡಿದೆ. ಅದನ್ನು ಠಾಣೆಯ ಅಧಿಕಾರಿಗಳು ಪಾಲನೆ ಮಾಡುತ್ತಿದ್ದಾರೆ. ಕೋರ್ಟ್ ಆದೇಶವನ್ನು ಪಾಲಿಸಬಾರದೆ? ಬಿಜೆಪಿಯವರಿಗೆ ಕೋರ್ಟ್ ಅಥವಾ ಕಾನೂನಿನ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದರು.

ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್‌ಕೌಂಟರ್‌

ಹುಬ್ಬಳ್ಳಿ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿ ವಿರುದ್ಧ 16 ಪ್ರಕರಣಗಳಿವೆ. ಅದರಲ್ಲಿ 9 ಪ್ರಕರಣಗಳು ಅಕ್ರಮ ಮದ್ಯಕ್ಕೆ ಸಂಬಂಧಪಟ್ಟಿದ್ದಾಗಿದೆ. ಅಂತಹ ಅಪರಾಧಿಗೆ ಬಿಜೆಪಿಯವರು ಬೆಂಬಲ ನೀಡುತ್ತಾ ಇದನ್ನು ರಾಷ್ಟ್ರೀಯ ವಿವಾದವಾಗಿ ಮಾಡಿದ್ದಾರೆ ಎಂದು ಕಿಡಿಕಾರಿದರು. ಪೊಲೀಸ್ ಇಲಾಖೆಯಲ್ಲಿನ ಪತಿ, ಪತ್ನಿ ಪ್ರಕರಣದಲ್ಲಿ ವರ್ಗಾವಣೆ ಮಾಡಿಕೊಡಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗುವುದು. ಕೆಸಿಎಸ್‍ಆರ್ ನಿಯಮಾವಳಿಗಳಂತೆಯೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ರಾಜಕೀಯ ಚರ್ಚೆ :
ನಿನ್ನೆ ರಾತ್ರಿ ನಡೆದ ಭೋಜನಾ ಕೂಟ ಸಭೆಯಲ್ಲಿ ಭಾಗವಹಿಸಿ ಊಟ ಮಾಡಿ ಬಂದಿದ್ದೇನೆ. ರಾಜಕಾರಣಿಗಳು ಒಂದೆಡೆ ಸೇರಿದ ಮೇಲೆ ರಾಜಕೀಯವೇ ಚರ್ಚೆಯಾಗುತ್ತದೆ. ಅಲ್ಲಿ ಏನೆಲ್ಲಾ ಮಾತುಕತೆ ನಡೆದಿದೆ ಎಂಬುದನ್ನು ಬಹಿರಂಗಪಡಿಸಲಾಗುವುದಿಲ್ಲ. ಅದು ರಹಸ್ಯ ಸಭೆ ಎಂದ ಮೇಲೆ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಹೇಗೆ ಸಾಧ್ಯ ಎಂದರು.

ವಿಧಾನಸಭೆ ಚುನಾವಣೆಗೂ ಮೊದಲು ಚಿತ್ರದುರ್ಗದಲ್ಲಿ ಕಾಂಗ್ರೆಸ್ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮಾವೇಶ ನಡೆಸಿ 10 ಘೋಷಣೆಗಳನ್ನು ಮಾಡಿದ್ದೆವು. ಅವುಗಳನ್ನು ಅನುಷ್ಠಾನಕ್ಕೆ ತರುವ ಸಂಬಂಧಪಟ್ಟಂತೆ ಒಂದಿಷ್ಟು ಚರ್ಚೆಯಾಗಿದೆ. ಮುಖ್ಯವಾಗಿ ಊಟಕ್ಕೆ ಸೇರುವ ಉದ್ದೇಶವಿತ್ತು ಎಂದು ಹೇಳಿದರು.

RELATED ARTICLES

Latest News