ಮಂಗಳೂರಲ್ಲಿ ಸ್ಪೋಟ ಸಂಭವಿಸಿದ ಸ್ಥಳಕ್ಕೆ ಗೃಹ ಸಚಿವರ ಭೇಟಿ

Social Share

ಶಿವಮೊಗ್ಗ,ನ.22- ಆಟೋ ರಿಕ್ಷಾದಲ್ಲಿ ಸ್ಪೋಟ ಸಂಭವಿಸಿದ ಘಟನೆಯ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಾಳೆ ಮಂಗಳೂರು ನಗರಕ್ಕೆ ಭೇಟಿ ನೀಡಿ ಹಿರಿಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಲಿದ್ದಾರೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಅವರನ್ನೊಳಗೊಂಡ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದು, ಘಟನೆಯ ಸಂಬಂಧ ಚರ್ಚೆ ನಡೆಯಲಿದೆ.

ಮಂಗಳೂರು ಭೇಟಿ ಸಂದರ್ಭದಲ್ಲಿ ಸಚಿವರು ಸ್ಪೋಟದ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಈ ಸಂಬಂದ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಂಗಳೂರು ಆಟೋ ರಿಕ್ಷಾ ಸ್ಪೋಟ ಘಟನೆಯನ್ನು ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಬಾಂಬ್ ಸ್ಪೋಟಕ್ಕೆ ಮೊಬೈಲ್ ಬಳಸಲು ಮೈಸೂರಲ್ಲಿ ತರಬೇತಿ ಪಡೆದಿದ್ದ ಕುಕ್ಕರ್ ಕ್ರಿಮಿ

ಭಯೋತ್ಪಾದನೆ ಚಟುವಟಿಕೆಗಳನ್ನು ಅಮೂಲಗ್ರಹವಾಗಿ ತನಿಖೆ ಮಾಡಿ ವಿದ್ರೋಹಿ ಗಳನ್ನು ಮಟ್ಟ ಹಾಕಲು ರಾಜ್ಯ ಪೋಲಿಸರು ಕೇಂದ್ರ ತನಿಖಾ ಸಂಸ್ಥೆಗಳ ಸಹಯೋಗದೊಂದಿಗೆ ಶ್ರಮಿಸುತ್ತಿದ್ದಾರೆ ಎಂದರು.

ಸ್ಪೋಟಕವನ್ನು ತಯಾರಿಸಿ ಭಯೋತ್ಪಾದನೆ ಕೃತ್ಯ ನಡೆಸಲು ತೆರಳುತ್ತಿದ್ದ ಎಂದು ತಿಳಿದುಬಂದಿದೆ. ಈ ಬಗ್ಗೆ ಸುಟ್ಟ ಗಾಯಗಳಿಂದ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಶಾರೀಕ್ ನಿಂದ ಇನ್ನೂ ಹೆಚ್ಚಿನ ಮಾಹಿತಿ ಹೊರ ಬರಬೇಕಿದೆ ಎಂದು ಹೇಳಿದರು.

ವಾಯುಭಾರ ಕುಸಿತ, ರಾಜ್ಯದಲ್ಲಿ ಇನ್ನೆರಡು ದಿನ ಮಳೆ

ಇದುವರೆಗಿನ ಮಾಹಿತಿ ಆಧಾರದಿಂದ ರಾಜ್ಯ ಪೋಲೀಸರು, ಉಗ್ರಗಾಮಿ ಚಟುವಟಕೆಗಳಿಗೆ ಸ್ನೇಹಹಸ್ತ ಚಾಚಿದವರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ ಎಂದು ತಿಳಿಸಿದರು.

Home, Minister, visits, Mangaluru, blast,araga jnanendra

Articles You Might Like

Share This Article