Friday, May 3, 2024
Homeರಾಜ್ಯರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಕುರಿತು ಗೃಹಸಚಿವ ಪ್ರತಿಕ್ರಿಯೆ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಕುರಿತು ಗೃಹಸಚಿವ ಪ್ರತಿಕ್ರಿಯೆ

ಬೆಂಗಳೂರು,ಮಾ.29- ನಗರದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚಾಲ್ತಿಯಲ್ಲಿದ್ದು, ಸದ್ಯದ ಹಂತದಲ್ಲಿ ಯಾವುದನ್ನೂ ಬಹಿರಂಗಪಡಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‍ಐಎ ಮತ್ತು ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕೆಲವು ಮಾಹಿತಿಗಳಿವೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.

ರಾಜ್ಯದಲ್ಲಿ ಬಾಕಿ ಇರುವ ನಾಲ್ಕು ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಎರಡು ದಿನದ ಒಳಗಾಗಿ ಅಭ್ಯರ್ಥಿಗಳನ್ನು ಘೋಷಿಸಲಿದೆ. ಚುನಾವಣೆ ಎಂದ ಮೇಲೆ ಒಂದೆರಡು ಕ್ಷೇತ್ರಗಳಲ್ಲಿ ಸಂಘರ್ಷ ಇದ್ದೇ ಇರುತ್ತದೆ. ಹಾಗಾಗಿ ಕೋಲಾರ ಒಂದೆರಡು ಮೂರು ಕ್ಷೇತ್ರಗಳಲ್ಲಿ ಪೈಪೋಟಿ ಸಹಜ ಎಂದರು.

ನಿನ್ನೆ ರಾತ್ರಿ ನಡೆದ ಚರ್ಚೆಯಲ್ಲಿ ನಾನೂ ಕೂಡಾ ಭಾಗವಹಿಸಿದ್ದೆ. ಬಹುತೇಕ ಎಲ್ಲವೂ ಅಂತಿಮಗೊಂಡಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಎಲ್ಲರೂ ಭರವಸೆ ನೀಡಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಪ್ರಕಟಗೊಳ್ಳಲಿದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ನಾನಾ ರೀತಿಯ ವ್ಯಾಖ್ಯಾನಗಳಾಗಬಹುದು. ಆದರೆ ಜನ ಯಾರಿಗೆ ಮತ ಹಾಕಬೇಕು ಎಂದು ತೀರ್ಮಾನಿಸಲಿದ್ದಾರೆ. ಕೆಲವರು ಮುಂಗಡವಾಗಿಯೇ ನಿರ್ಧಾರ ತೆಗೆದುಕೊಂಡರೆ ಇನ್ನೂ ಕೆಲವರು ವ್ಯಕ್ತಿ ಹಾಗೂ ಪರಿಸ್ಥಿತಿಯನ್ನು ಆಧರಿಸಿ ಕೊನೆಕ್ಷಣದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ.

ಪಕ್ಷದ ಕಾರಣಕ್ಕಾಗಿ ಬಹಳಷ್ಟು ಮಂದಿ ಕಟಿಬದ್ಧರಾಗಿರುತ್ತಾರೆ. ಅದಕ್ಕೆ ಧಕ್ಕೆಯಾದಾಗ, ಸಿದ್ಧಾಂತದ ದಾರಿ ತಪ್ಪಿದಾಗ ಅನ್ಯಪಕ್ಷಗಳಿಗೆ ವಲಸೆ ಹೋಗುವುದು ಸಾಮಾನ್ಯ. ಅದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್-ಬಿಜೆಪಿಯ ಅಭ್ಯರ್ಥಿಗಳು ಕಾಂಗ್ರೆಸ್‍ನತ್ತ ವಲಸೆ ಬರುತ್ತಿದ್ದಾರೆ ಎಂದು ಹೇಳಿದರು.

RELATED ARTICLES

Latest News