ಮೂವರು ಮನೆಗಳ್ಳರ ಸೆರೆ; 103 ಗ್ರಾಂ ಚಿನ್ನಾಭರಣ ಜಪ್ತಿ

Social Share

ಬೆಂಗಳೂರು, ಫೆ.11- ಮನೆಯ ಬೀಗ ಒಡೆದು ಚಿನ್ನಾಭರಣ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಧಿಸಿ 4.50 ಲಕ್ಷ ಬೆಲೆಯ 103 ಗ್ರಾಂ ತೂಕದ ಚಿನ್ನದ ಆಭರಣಗಳು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಡಿ.1ರಿಂದ 26ರ ನಡುವೆ ಪಿರ್ಯಾದುದಾರರ ಮಗಳ ಸ್ನೇಹಿತರು ಮನೆಯಲ್ಲಿಲ್ಲದ ಸಂದರ್ಭದಲ್ಲಿ ಕಳ್ಳರು ಇವರ ಮನೆಯ ಬೀಗ ಒಡೆದು ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್‍ಪೆಕ್ಟರ್ ರವಿಕುಮಾರ್ ಹಾಗೂ ಸಿಬ್ಬಂದಿ ತನಿಖೆ ಕೈಗೊಂಡು ಮೂವರನ್ನು ಪತ್ತೆಹಚ್ಚಿ ಬಂಧಿಸಿ ವಿಚಾರಣೆಗೊಳಪಡಿಸಿದರು.
ಆರೋಪಿಗಳು ಕಳವು ಪ್ರಕರಣ ಸೇರಿದಂತೆ ಬ್ಯಾಡರಹಳ್ಳಿ ಮತ್ತು ನಂದಿನಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕಳವು ಮಾಡಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Articles You Might Like

Share This Article