ಹಾಪ್‍ಕಾಮ್ಸ್ ಮಳಿಗೆಗಳನ್ನು ಮೇಲ್ದರ್ಜೆಗೇರಿಸಲು ಚಿಂತನೆ

Social Share

ಬೆಂಗಳೂರು, ಮಾ.3- ಹಾಪ್‍ಕಾಮ್ಸ್ ಮಳಿಗೆಗಳನ್ನು ಮೇಲ್ದರ್ಜೆಗೇರಿಸಲು ಉದ್ದೇಶಿಸಲಾಗಿದೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ತಿಳಿಸಿದರು.ಲಾಲ್‍ಬಾಗ್‍ನ ಹಾಪ್‍ಕಾಮ್ಸ್‍ನಲ್ಲಿ ಹಮ್ಮಿಕೊಂಡಿರುವ ಕಲ್ಲಂಗಡಿ ಹಾಗೂ ದ್ರಾಕ್ಷಿ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಬೆಲೆ ಕುಸಿತವಾದಾಗ ರೈತರ ಉತ್ಪನ್ನಗಳನ್ನು ದಾಸ್ತಾನು ಮಾಡಲು ಅನುಕೂಲವಾಗುವಂತೆ 10 ಟನ್ ಸಾಮಥ್ರ್ಯದ ಎರಡು ಶೀಥಲ ಗೃಹ ಉದ್ಘಾಟಿಸಲಾಗಿದೆ ಎಂದರು.
ಬಜೆಟ್‍ನಲ್ಲಿ ಹಾಪ್‍ಕಾಮ್ಸ್ ಮೇಲ್ದರ್ಜೆಗೇರಿಸಲು ಹಾಗೂ ಎರಡು ಶೀಥಲ ಗೃಹ ನಿರ್ಮಾಣಕ್ಕೆ ಅನುದಾನ ಒದಗಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ ಎಂದರು. ವಿವಿಧ ತಳಿಯ ದ್ರಾಕ್ಷಿ ಮಾರುಕಟ್ಟೆಗೆ ಬಂದಿದೆ. ಪ್ರತಿ ವರ್ಷದಂತೆ ಈ ವರ್ಷವೂ ರೈತರಿಗೆ ಉತ್ತಮ ಮಾರುಕಟ್ಟೆ ಕಲ್ಪಿಸಲು ಮತ್ತು ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ದ್ರಾಕ್ಷಿ, ಕಲ್ಲಂಗಡಿ ಒದಗಿಸಲು ಮೇಳ ಆಯೋಜಿಸಲಾಗಿದೆ ಎಂದರು. ಸುಮಾರು 15 ಬಗೆಯ ದ್ರಾಕ್ಷಿ, ಮೂರರಿಂದ ನಾಲ್ಕು ಬಗೆಯ ಕಲ್ಲಂಗಡಿ ಹಣ್ಣನ್ನು ಮಾರಾಟಕ್ಕೆ ಒದಗಿಸಲಾಗಿದೆ ಎಂದರು.
ಹಾಪ್‍ಕಾಮ್ಸ್ ಅಧ್ಯಕ್ಷ ಎನ್.ದೇವರಾಜ್, ವ್ಯವಸ್ಥಾಪಕ ನಿರ್ದೇಶಕ ಉಮೇಶ್ ಶಂಕರ್ ಮಿರ್ಜಿ, ನಿರ್ದೇಶಕರಾದ ಶಿವಮಾಧು, ಕರ್ನಾಟಕ ತೋಟಗಾರಿಕಾ ಮಹಾಮಂಡಲ ಅಧ್ಯಕ್ಷ ಭೂಕಾಂತ್, ವ್ಯವಸ್ಥಾಪಕ ನಿರ್ದೇಶಕಿ ಹೇಮಾ, ಹಾಪ್‍ಕಾಮ್ಸ್ ಮಾಜಿ ಅಧ್ಯಕ್ಷ ಮುನೇಗೌಡ, ಚಂದ್ರೇಗೌಡ, ನಾಗವೇಣಿ ಮತ್ತಿತರರು ಉಪಸ್ಥಿತರಿದ್ದರು.

Articles You Might Like

Share This Article