ನಿತ್ಯ ನೀತಿ : ನಾವು ಕೆಲವರಿಂದ ಮೋಸ ಹೋಗಿರಬಹುದು. ಅದಕ್ಕೆ ಕಾರಣ ಅವರ ಚಾಣಾಕ್ಷತನ ಅಲ್ಲ , ಅವರ ಮೇಲೆ ನಾವು ಇಟ್ಟ ನಂಬಿಕೆ.
ಪಂಚಾಂಗ : ಸೋಮವಾರ, 02-08-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಆಷಾಢ /
ಪಕ್ಷ: ಕೃಷ್ಣ / ತಿಥಿ: ಪಂಚಮಿ / ನಕ್ಷತ್ರ: ಉ.ಭಾ. / ಯೋಗ: ಸುಕರ್ಮಾ / ಕರಣ: ಕೌಲವ
ಸೂರ್ಯೋದಯ – ಬೆ.6.05
ಸೂರ್ಯಾಸ್ತ – 06.48
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಅಂದುಕೊಂಡ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ನೆರವೇರಲಿವೆ.
ವೃಷಭ: ಧ್ಯಾನ ಮಾಡುವುದರಿಂದ ಮನಸ್ಸು ನಕಾರಾತ್ಮಕ ಭಾವನೆಯಿಂದ ಹೊರಬರಲಿದೆ.
ಮಿಥುನ: ಬಹಳ ದಿನಗಳ ನಂತರ ಕಚೇರಿಯ ಕೆಲಸ-ಕಾರ್ಯಗಳಲ್ಲಿ ತೃಪ್ತಿಕರವಾಗಲಿದೆ.
ಕಟಕ: ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ ಮಾಡಬೇಕಾದ ಸಂದರ್ಭ ಬರಲಿದೆ.
ಸಿಂಹ: ಸಂಗಾತಿಯೊಂದಿಗೆ ಇದ್ದ ಕೆಲವು ಭಿನ್ನಾಭಿಪ್ರಾಯಗಳು ಬಗೆಹರಿಯಬಹುದು.
ಕನ್ಯಾ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.
ತುಲಾ: ತಂದೆ-ತಾಯಿಯರ ಹಿತವಚನವನ್ನು ಸಹನೆ ಯಿಂದ ಕೇಳುವುದು ಒಳಿತು.
ವೃಶ್ಚಿಕ: ಆರ್ಥಿಕ ವಿಚಾರದಲ್ಲಿ ತಕ್ಕಮಟ್ಟಿನ ಸುಧಾರಣೆ ಕಂಡುಕೊಳ್ಳುವಿರಿ.
ಧನುಸ್ಸು: ವಾಹನ ಚಾಲನೆ ಹಾಗೂ ವಾಹನದಲ್ಲಿ ಪ್ರಯಾಣಿಸುವಾಗ ಹೆಚ್ಚು ಜಾಗೃತರಾಗಿರಿ.
ಮಕರ: ಅತಿಯಾದ ಆಲಸ್ಯ ನಿಮ್ಮ ಕೆಲಸಕ್ಕೆ ಅಡ್ಡಿ ಉಂಟುಮಾಡಲಿದೆ. ದೂರ ಪ್ರಯಾಣ ಬೇಡ.
ಕುಂಭ: ಆಹಾರದಲ್ಲಿನ ಬದಲಾವಣೆಯಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ.
ಮೀನ: ವೃತ್ತಿ ಜೀವನದಲ್ಲಿ ಬಹಳಷ್ಟು ಬದಲಾವಣೆ ಗಳಾಗಲಿವೆ. ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ.
