ನಿತ್ಯ ನೀತಿ : ನಾಲಿಗೆ ಮಾತು ಕಲಿಯಲು ಮೂರು ವರ್ಷ ಬೇಕು, ಆದರೆ ಆ ಮಾತನ್ನು ಎಲ್ಲಿ, ಯಾವಾಗ, ಹೇಗೆ ಆಡಬೇಕೆಂಬುದನ್ನು ಜೀವನವಿಡೀ ಕಲಿಯಬೇಕು.
ಪಂಚಾಂಗ : ಬುಧವಾರ, 04-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಆಶ್ವಯುಜ / ಪಕ್ಷ: ಕೃಷ್ಣ / ತಿಥಿ: ದಶಮಿ / ನಕ್ಷತ್ರ: ಪೂರ್ವಾ / ಯೋಗ: ಬ್ರಹಾ / ಕರಣ: ಬವ
ಸೂರ್ಯೋದಯ – ಬೆ.6.14
ಸೂರ್ಯಾಸ್ತ – 05.53
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚಿನ ಪರಿಶ್ರಮ ವಹಿಸಬೇಕಾಗುತ್ತದೆ.
ವೃಷಭ: ನಿರೀಕ್ಷೆಗಿಂತ ಹೆಚ್ಚು ಖರ್ಚು ಮಾಡಬೇಕಾದ ಸಂದರ್ಭಗಳು ಎದುರಾಗಬಹುದು.
ಮಿಥುನ: ಮನೆಯ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ನಿಭಾಯಿಸಬೇಕು.
ಕಟಕ: ಪತ್ರಿಕೆ ಮತ್ತು ಕೆಲವು ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಕೆಲಸದ ಅಸ್ಥಿರತೆ ಕಾಡಲಿದೆ.
ಸಿಂಹ: ಸುತ್ತಮುತ್ತಲಿನ ಜನರೊಂದಿಗೆ ಜಗಳ ವಾಡದಿರುವುದು ಸೂಕ್ತ.
ಕನ್ಯಾ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಕುಟುಂಬ ಸದಸ್ಯ ರೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ತುಲಾ: ಶಿಕ್ಷಕರೊಂದಿಗೆ ಉತ್ತಮ ಸಂಬಂಧ ಕಾಪಾಡಿ ಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.
ವೃಶ್ಚಿಕ: ಆಸ್ತಿ, ಅಪಾರ್ಟ್ಮೆಂಟ್ ಖರೀದಿಯಲ್ಲಿ ಅಧಿಕ ಹಣ ಹೂಡಿಕೆ ಮಾಡುವಿರಿ.
ಧನುಸ್ಸು: ಬೆನ್ನು ನೋವು ಮತ್ತು ಸ್ನಾಯು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಕಾರಣ ಕೆಲವು ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ.
ಮಕರ: ಅಧಿಕೃತ ಪ್ರಯಾಣ ಕೈಗೊಳ್ಳುವಿರಿ ಮತ್ತು ಅದರಿಂದ ಪ್ರಯೋಜನ ಸಿಗಲಿದೆ.
ಕುಂಭ: ಕೌಟುಂಬಿಕ ಅಗತ್ಯತೆ ಮತ್ತು ಜವಾಬ್ದಾರಿ ಪೂರೈಸಲು ಹಣ ಖರ್ಚು ಮಾಡಬೇಕಾಗುತ್ತದೆ.
ಮೀನ: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.
